ಕನ್ನಡಪ್ರಭ ವಾರ್ತೆ ಸಿಂಧನೂರು
ನಂತರ ಡೊಳ್ಳು ವಾದ್ಯದೊಂದಿಗೆ ಆರಂಭಗೊಂಡ ಜಾಥಾ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಕನಕದಾಸ ವೃತ್ತ, ಸಾರ್ವಜನಿಕ ಆಸ್ಪತ್ರೆ ರಸ್ತೆ, ಗಾಂಧಿ ಸರ್ಕಲ್, ಬಸ್ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತ, ಬಾಬು ಜಗಜೀವನರಾಂ ವೃತ್ತದ ಮೂಲಕ ಎಪಿಎಂಸಿಗೆ ತಲುಪಿತು.
ಜಾಥಾ ಉದ್ದಕ್ಕೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಬಿಳಿ ಟೀಶರ್ಟ್ ಧರಿಸಿ, ಕೈಯಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತಾದ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು.ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ತಹಸೀಲ್ದಾರ್ ಅರುಣ್ ಎಚ್.ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಯಪ್ರಕಾಶ, ಸಹಾಯಕ ನಿರ್ದೇಶಕ ನಜೀರ್ ಅಹ್ಮದ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸೈಯ್ಯದ್ ಆಸೀಫ್ ಇದ್ದರು.