ಕನ್ನಡಪ್ರಭ ವಾರ್ತೆ ನಾಗಮಂಗಲ
ಫೆ.೨೪ರಂದು ಬೆಳಗ್ಗೆ ೬.೩೦ಗಂಟೆಗೆ ಶ್ರೀಕ್ಷೇತ್ರದಲ್ಲಿ ಮಹಾ ಪೂಜೆ ಬಳಿಕ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ನಾಂದಿ ಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವ ಮೂಲಕ ೯ದಿನಗಳ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡುವರು. ಅದೇ ದಿನ ಬೆಳಗ್ಗೆ ೧೦ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಫೆ.೨೫ರ ಸಂಜೆ ೬ ಗಂಟೆಗೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಫೆ.೨೬ರ ಸಂಜೆ ೬ ಗಂಟೆಗೆ ಸರ್ವಾಲಂಕೃತ ಶ್ರೀ ಮಲ್ಲೇಶ್ವರ ಸ್ವಾಮಿ ಉತ್ಸವ ನಡೆಯಲಿದೆ.ಫೆ.೨೭ರ ಬೆಳಗ್ಗೆ ೯.೩೦ಕ್ಕೆ ಸರಳ ಸಾಮೂಹಿಕ ವಿವಾಹ ಹಾಗೂ ವಿವಾಹವಾಗಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಹಿರಿಯ ದಂಪತಿಗಳಿಂದ ಆಶೀರ್ವಾದದ ವ್ಯವಸ್ಥೆ ಮಾಡಲಾಗಿದೆ. ೫೦ ವರ್ಷಗಳ ಕಾಲ ಜೀವನ ನಡೆಸಿ ಸತಿಪತಿಗಳಾಗಿ ಧನ್ಯೋಗೃಹಸ್ಥಾಶ್ರಮಃ ಎಂಬಂತೆ ಬದುಕಿದ ದಂಪತಿಗಳನ್ನೂ ಶ್ರೀಮಠದ ಪರವಾಗಿ ಸನ್ಮಾನಿಸಲಾಗುವುದು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ೨೧ ವರ್ಷ ಮೇಲ್ಪಟ್ಟ ವರ ಹಾಗೂ ೧೮ ವರ್ಷ ಮೇಲ್ಪಟ್ಟ ವಧುವಿಗೆ ಉಚಿತವಾಗಿ ತಾಳಿ, ಕಾಲುಂಗುರ, ಬಾಗಿನ ಮತ್ತು ವಧು-ವರರಿಗೆ ವಸ್ತ್ರಗಳನ್ನು ನೀಡುವುದರ ಜೊತೆಗೆ ಸಂಬಂಧಿಕರು ಹಾಗೂ ಹಿತೈಷಿಗಳಿಗೆ ಭೋಜನ ವ್ಯವಸ್ಥೆಯನ್ನು ಸಹ ಆಯೋಜಿಸಲಾಗಿದೆ.ಅಂದು ಸಂಜೆ ೬ ಗಂಟೆಗೆ ಸರ್ವಾಲಂಕೃತ ಶ್ರೀ ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಯಲಿದೆ.
ಮಾ.೧ರ ಬೆಳಗ್ಗೆ ೬.೩೦ಕ್ಕೆ ಶ್ರೀಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚಾಲಂಕಾರ ಪೂಜೆ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ನಡೆಯಲಿದೆ. ಅಂದು ಸಂಜೆ ೭.೩೦ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜ್ವಾಲಾಪೀಠಾರೋಹಣ ಮತ್ತು ಸಿದ್ಧ ಸಿಂಹಾಸನ ಪೂಜೆ ಹಾಗೂ ರಾತ್ರಿ ೮ ಗಂಟೆಗೆಚಂದ್ರಮಂಡಲೋತ್ಸವ ಪೂಜೆ ನಡೆಯಲಿದೆ.
ಮಾ.೩ರ ಮುಂಜಾನೆ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ಹಾಗೂ ಅಡ್ಡಪಾಲಕಿ ಉತ್ಸವ ಜರುಗಲಿದೆ. ನಾಡಿನಾದ್ಯಂತ ಸಾವಿರಾರು ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ. ಇದೇ ದಿನ ಸಂಜೆ ೬ಗಂಟೆಗೆ ವಿವಿಧ ಗ್ರಾಮಗಳ ನೂರಾರು ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ಗಿರಿ ಪ್ರದಕ್ಷಿಣಿ ನಡೆಯಲಿದೆ. ಬಳಿಕ ಸಂಜೆ ೬ಕ್ಕೆ ಶ್ರೀ ಸೋಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ.
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ: