ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 805 ವಿದ್ಯಾರ್ಥಿಗಳು ವ್ಯಾಸಂಗ: ಡಾ. ಕೆ ಐ ಪರಶಿವಮೂರ್ತಿ
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಕೊಡಗು ಜಿಲ್ಲೆ ಮತ್ತು ನೆರೆಯ ಜಿಲ್ಲೆಗಳ ಅಭ್ಯರ್ಥಿಗಳು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರಾಂಶುಪಾಲರು ಮನವಿ ಮಾಡಿದರು.
ಉತ್ತಮ ತಾಂತ್ರಿಕ ಸೌಲಭ್ಯಗಳು: ಸರ್ಕಾರಿ ಕಾಲೇಜುಗಳ ಪೈಕಿ ಉತ್ತಮ ಮೂಲ ಸೌಲಭ್ಯ ಹಾಗೂ ತಾಂತ್ರಿಕ ಸೌಲಭ್ಯಗಳು, ಸುಸಜ್ಜಿತ ಸೆಮಿನಾರ್ ಹಾಲ್ ಗಳು, ಪ್ರಯೋಗಾಲಯಗಳು ಸೇರಿದಂತೆ ಕಂಪ್ಯೂಟರ್ ಗಳ ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಹಿರಿಯ ಬೋಧಕ ವರ್ಗದವರನ್ನು ಹೊಂದಿರುವ ಈ ಕಾಲೇಜು ಕೊಡಗಿನ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಕೆ.ಐ ಪರಶಿವಮೂರ್ತಿ ತಿಳಿಸಿದರು.ಶೇಕಡಾ 90ರಷ್ಟು ಕೃಷಿಕರ ಗ್ರಾಮಾಂತರ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅವರು ಕೋರಿದರು. ಜಿಲ್ಲೆಯ ಹಾಗೂ ಸ್ಥಳೀಯ ಅರ್ಹ ವಿದ್ಯಾರ್ಥಿಗಳು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿದೆ ಎಂದು ಹೇಳಿದರು.ತರಬೇತಿ ಮತ್ತು ಪ್ಲೇಸ್ಮೆಂಟ್: ಕಳೆದ 18 ವರ್ಷಗಳ ಹಿಂದೆ ಆರಂಭಗೊಂಡ ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಕೋರ್ಸ್ ಪೂರೈಸುವ ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗ ಕಂಡುಕೊಳ್ಳುವ ದಿಸೆಯಲ್ಲಿ ಕಾಲೇಜಿನಲ್ಲಿ ಟಿ.ಸಿ.ಎಸ್ ಕಂಪನಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಇನ್ನಿತರ ಕಂಪನಿಗಳಿಂದ ನಿಶ್ಚಿತ ಉದ್ಯೋಗ ಕೊಡುವ ವ್ಯವಸ್ಥೆ ಮತ್ತು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳುವ ಕಾರ್ಯವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷ ನಡೆದ ಪ್ಲೇಸ್ಮೆಂಟ್ ಆಯ್ಕೆ ಪ್ರಕ್ರಿಯೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಾಗತಿಕ ಹಾಗೂ ಖಾಸಗಿ ಕಂಪನಿಗಳಿಗೆ ನೇಮಕಗೊಂಡು ಉದ್ಯೋಗ ಮಾಡುತ್ತಿದ್ದಾರೆ ಎಂದು ಮಾಹಿತಿ ಒದಗಿಸಿದರು.ಹಿಂದಿನ ಶಾಸಕರು, ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್ ಅವರ ಅವಧಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ್ದು, ಇದೀಗ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಕಾಲೇಜಿನ ಅಭಿವೃದ್ಧಿಗಾಗಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸಿ ಬಹುತೇಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಮಾಹಿತಿ ನೀಡಿದರು.ಉತ್ತಮ ಫಲಿತಾಂಶ:
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.ಹಿರಿಯ ಸಂದರ್ಭ ಕಾಲೇಜಿನ ಮಾಹಿತಿಗಳನ್ನು ಒಳಗೊಂಡ ಭಿತ್ತಿ ಪತ್ರ ಬಿಡುಗಡೆಗೊಳಿಸಿದರು.ಗೋಷ್ಠಿಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರೂ ಆದ ಸಹ ಪ್ರಾಧ್ಯಾಪಕ ಡಾ ಎಸ್.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್, ಕಂಪ್ಯೂಟರ್ ವಿಭಾಗದ ಜಿ.ಶ್ರೀನಾಥ್, ಕಚೇರಿಯ ಅಧೀಕ್ಷಕರಾದ ಎಚ್.ಎ.ರೂಪಾ, ಎಂ.ಮಂಜು ಇದ್ದರು.