ಕನ್ನಡಪ್ರಭ ವಾರ್ತೆ ಮಂಡ್ಯ
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವೇಶ ಪರೀಕ್ಷೆಯು ಜಿಲ್ಲೆಯಲ್ಲಿ ೨ ತಾಲೂಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಕೆ.ಆರ್.ಪೇಟೆ ತಾಲೂಕಿನ ೩ ಪರೀಕ್ಷಾ ಕೇಂದ್ರಗಳು ಹಾಗೂ ಮಂಡ್ಯ ತಾಲೂಕಿನಲ್ಲಿ ೯ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ಜಿಲ್ಲೆಯ ೧೨ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಕೆ.ಆರ್.ಪೇಟೆ ತಾಲೂಕಿನ ೩ ಕೇಂದ್ರದಲ್ಲಿ ಒಟ್ಟು ೧೫೯೯ ವಿದ್ಯಾರ್ಥಿಗಳು ಹಾಗೂ ಮಂಡ್ಯದ ೯ ಕೆಂದ್ರದಲ್ಲಿ ಒಟ್ಟು ೪೬೬೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲಾದ್ಯಂತ ೧೨ ಕೇಂದ್ರಗಳಿಲ್ಲಿ ಒಟ್ಟು ೬೨೫೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ವೆಬ್ ಕಾಸ್ಟಿಂಗ್ ಮೇಲುಸ್ತುವಾರಿಯನ್ನು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೋಡಿಕೊಳ್ಳಬೇಕು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಕೆ.ಆರ್.ಪೇಟೆ ತಾಲೂಕಿನ ಬೆಳಗಿನ ಅವಧಿಯ ಪ್ರಶ್ನೆಪತ್ರಿಕೆಯೊಂದಿಗೆ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ತ್ರಿಸದಸ್ಯ ಸಮಿತಿಯವರೊಂದಿಗೆ ಕಳುಹಿಸಿ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ಕೆ.ಆರ್.ಪೇಟೆ ತಾಲೂಕು ಖಜಾನೆಯಲ್ಲಿರಿಸುವಂತೆ ತಾಲೂಕು ಖಜಾನಾಧಿಕಾರಿಯವರಿಗೆ ತಿಳಿಸಬೇಕು. ಬೆಳಗ್ಗೆ ಮತ್ತು ಮಧ್ಯಾಹ್ನದ ಅವಧಿಯ ಪ್ರಶ್ನೆಪತ್ರಿಕೆ ಅವಧಿ ಮುಗಿದ ಬಳಿಕ ಆಯಾ ದಿನದಂದೇ ಎರಡು ಅವಧಿಯ ಉತ್ತರ ಪತ್ರಿಕೆಗಳನ್ನು ಮಂಡ್ಯ ಜಿಲ್ಲಾ ಖಜಾನೆಗೆ ರವಾನಿಸುವಂತೆ ತಿಳಿಸಿದರು.
ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲು ಇಬ್ಬರು ಪಿಸಿಗಳು (ಮಹಿಳಾ ಸಿಬ್ಬಂದಿಯನ್ನೊಳಗೊಂಡಂತೆ) ಹೊಮ್ ಗಾರ್ಡ್‌ಗಳನ್ನು ನಿಯೋಜಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಬೋಧಿಸುವ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತಿಲ್ಲ. ಸಿ.ಇ.ಟಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಸಿಇಟಿ ಪರೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳಬಾರದಂತೆ ಕ್ರಮ ವಹಿಸಬೇಕು. ಹೆಚ್ಚುವರಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ವೈದ್ಯಾಧಿಕಾರಿಗಳನ್ನು ನೇಮಿಸುವುದು, ಪ್ರಥಮ ಚಿಕಿತ್ಸೆಗೆ ಬೇಕಾಗುವ ಔಷಧಗಳನ್ನು ಒದಗಿಸಿ ವೆಬ್‌ಕಾಸ್ಟಿಂಗ್ ಮಾಡುವ ಸಂಬಂಧ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾಡಬೇಕು ಎಂದರು.