ಚಿಕ್ಕಮಗಳೂರುಚಿಕ್ಕಮಗಳೂರು ನಗರದ ಎಂಟು ಪರೀಕ್ಷಾ ಕೇಂದ್ರದಲ್ಲಿ ಗುರುವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆದವು. ಈ ವೇಳೆ ಮೂಗುತಿ ಹಾಕಿದ್ದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಪ್ ಹಾಕಿದ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಚಿಕ್ಕಮಗಳೂರು ನಗರದ ಎಂಟು ಪರೀಕ್ಷಾ ಕೇಂದ್ರದಲ್ಲಿ ಗುರುವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆದವು. ಈ ವೇಳೆ ಮೂಗುತಿ ಹಾಕಿದ್ದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಪ್ ಹಾಕಿದ ಘಟನೆ ನಡೆದಿದೆ.
ಒಟ್ಟು 3229 ವಿದ್ಯಾರ್ಥಿಗಳು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನೋಂದಣಿ ಮಾಡಿಕೊಂಡಿದ್ದರು.
ಪರೀಕ್ಷಾ ಕೇಂದ್ರ ಪ್ರವೇಶದಲ್ಲಿ ಲೋಹದ ವಸ್ತುಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಆದರೆ, ಮೂಗುತಿ ಧರಿಸಿದ ವಿದ್ಯಾರ್ಥಿನಿ ಯರಿಗೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಮೇಲಾಧಿಕಾರಿಗಳು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಮೂಗುತಿ ಧರಿಸಿದ ವಿದ್ಯಾರ್ಥಿಗಳಿಗೆ ಮೂಗುತಿ ಮೇಲೆ ಗಮ್ ಟೇಪ್ ಹಾಕಿ ಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಬಿಟ್ಟರೆ, ಪರೀಕ್ಷೆ ಸುಸೂತ್ರವಾಗಿ ನಡೆಯಿತು.
130 ವಿದ್ಯಾರ್ಥಿಗಳು ಗೈರು
ಗುರುವಾರ ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತಶಾಸ್ತ್ರ ವಿಷಯಕ್ಕೆ ಪರೀಕ್ಷೆ ನಡೆಯಿತು. 3229 ವಿದ್ಯಾರ್ಥಿಗಳ ಪೈಕಿ 3099 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದು, 130 ವಿದ್ಯಾರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನ 2.30 ರಿಂದ 3.50ರ ವರೆಗೆ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 131 ವಿದ್ಯಾರ್ಥಿಗಳು ಗೈರಾಗಿದ್ದು, 3098 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ 10.30ರಿಂದ 11.50ರ ವರೆಗೆ ಗಣಿತ ಮತ್ತು ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಗಳ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.