ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು, ಶಿಕ್ಷಣ ಮತ್ತು ಸಮಾನತೆಗೆ ಅವಿರತವಾಗಿ ಶ್ರಮಿಸುವ ಮೂಲಕ ಹಿಂದೂ ಕೋಡ್ ಬಿಲ್ ಜಾರಿಗೆ ತಂದು ಆ ಮೂಲಕ ಮಹಿಳೆಯರಿಗೆ ಆಸ್ತಿಯ ಮತ್ತು ವಿಚ್ಛೇದನದ ಹಕ್ಕು ನೀಡಿದರು
- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ
-------ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆ ಹಾಗೂ ಮಹಿಳಾ ಸಬಲೀಕರಣಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.ತಾಲೂಕಿನ ರಾಜನಬಿಳುಗುಲಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು, ಶಿಕ್ಷಣ ಮತ್ತು ಸಮಾನತೆಗೆ ಅವಿರತವಾಗಿ ಶ್ರಮಿಸುವ ಮೂಲಕ ಹಿಂದೂ ಕೋಡ್ ಬಿಲ್ ಜಾರಿಗೆ ತಂದು ಆ ಮೂಲಕ ಮಹಿಳೆಯರಿಗೆ ಆಸ್ತಿಯ ಮತ್ತು ವಿಚ್ಛೇದನದ ಹಕ್ಕು ನೀಡಿದರು, ಸಂವಿಧಾನದಲ್ಲಿ ಲಿಂಗ ಸಮಾನತೆಗೆ ಒತ್ತು ನೀಡಿ, ಶಿಕ್ಷಣದ ಮೂಲಕ ಮಹಿಳಾ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಅವರು ಸಂವಿಧಾನ ರಚಿಸಿಕೊಟ್ಟ ನಂತರದ ದಿನಗಳಲ್ಲಿ ನಾಲ್ಕು ಗೋಡೆಗೆ ಸೀಮಿತವಾಗಿದ್ದ ಮಹಿಳೆ ಪ್ರತಿ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದರು.ವೇದಿಕೆಯಲ್ಲಿ ನಾಗಲಕ್ಷ್ಮಿ ಚೌಧರಿ ಅವರಿಗೆ ಬಾಗಿನ ನೀಡಿ, ಅಭಿನಂದಿಸಲಾಯಿತು. ಆಶ್ರಯ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪ್ರಜಾ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನವೀನ್, ತಾಲೂಕು ಅಧ್ಯಕ್ಷ ಗುರುರಾಜ್, ಕಾರ್ಯಕ್ರಮದ ಮುಖ್ಯ ಭಾಷಣಕಾರ ನಾಗರಾಜ್, ಸಮಾಜ ಸೇವಕ ಶಿವಣ್ಣ, ರಾಗಿಮರೂರು ಕನಕದಾಸ ಯುವಕರ ಸಂಘದ ಅಧ್ಯಕ್ಷ ಮರಿಗೌಡ, ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್, ಪಿಡಿಒ ರವಿಕುಮಾರ್, ತಾಪಂ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್, ಸರಸ್ವತಿ, ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಆರ್.ಟಿ. ದರ್ಶನ್, ಉಪಾಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಪುನೀತ್, ಖಜಾಂಚಿ ಯಶ್ವಂತ್, ಪದಾಧಿಕಾರಿಗಳಾದ ರವಿ, ವಸಂತ, ಶಿವಯ್ಯ, ಪೂರ್ಣಚಂದ್ರ, ವೆಂಕಟೇಶ್, ಪ್ರಮೋದ್, ಗಗನ್, ಶರತ್, ಸಂತೋಷ್, ಅರುಣ್, ಅಕ್ಷಯ್, ಅಮಿತ್, ಸುಮಂತ್, ಸುದೀಪ್, ರಚಿತ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.