ಸಾರ್ವಜನಿಕ ಶೌಚಾಲಯ ನಿರ್ಮಾಣ ಜಾಗ ಪರಿಶೀಲಿಸಿದ ಶಾಸಕ ಟಿ.ರಘುಮೂರ್ತಿ
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಚಳ್ಳಕೆರೆ ನಗರದ ಅಭಿವೃದ್ಧಿಗೆ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದ್ದು, ಕಳೆದ ಕೆಲವು ತಿಂಗಳಿಂದ ತಟಸ್ಥಗೊಂಡಿದ್ದ ಕಾಮಗಾರಿಗಳನ್ನು ಪುನರ್ ಆರಂಭಿಸಲಾಗಿದೆ. ಸಾರ್ವಜನಿಕ ಒತ್ತಾಯದ ಹಿನ್ನೆಲೆಯಲ್ಲಿ ಖಾಸಗಿ ಬಸ್ ನಿಲ್ದಾಣ, ಡಿವೈಎಸ್‌ಪಿ ಕಚೇರಿ ಮತ್ತು ಇಂದಿರಾ ಕ್ಯಾಂಟಿನ್ ಬಳಿ ಸುಮಾರು 63 ಲಕ್ಷ ವೆಚ್ಚದಲ್ಲಿ ವಿವಿಧ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಶಾಸಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.ಶುಕ್ರವಾರ ಸಂಜೆ ನಗರದ ಖಾಸಗಿ ಬಸ್ಟಾಂಡ್‌ಗೆ ಭೇಟಿ ನೀಡಿ ಸುಮಾರು 30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಾಹತಾಕಾಂಕ್ಷೆ ಸಾರ್ವಜನಿಕ ಶೌಚಾಲಯ ನಿರ್ಮಾಣ ಜಾಗವನ್ನು ಪರಿಶೀಲನೆ ನಡೆಸಿದರು. ಅಲ್ಲಿಂದ ಹಣ್ಣಿನ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಯಿತು.
ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ವಿನಯ್, ನೈರ್ಮಲ್ಯ ಎಂಜಿನಿಯರ್ ನರೇಂದ್ರಬಾಬು, ಚೇತನ್, ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.