ಇಂದು ಕಲಬುರ್ಗಿಯಲ್ಲಿ ಸಚಿವರ ಮನೆ ಚಲೋ

KannadaprabhaNewsNetwork |  
Published : Oct 01, 2024, 01:38 AM ISTUpdated : Oct 01, 2024, 01:39 AM IST
 ಸಚಿವರ ಮನೆ ಚಲೋ ಪ್ರತಿಭಟನೆ ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮ ಪಂಚಾಯತಿ ನೌಕರರ ೧೯ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವರ ಮನೆಯ ಮುಂದೆ ಅ.೧ ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗ ವಹಿಸಿಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ ನಾಡಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಗ್ರಾಮ ಪಂಚಾಯತಿ ನೌಕರರ ೧೯ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವರ ಮನೆಯ ಮುಂದೆ ಅ.೧ ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗ ವಹಿಸಿಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ ನಾಡಗೌಡ ಹೇಳಿದರು.

ನಗರದ ಎಪಿಎಂಸಿ ರೈತ ಸಂಘದ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿಗಳ ಕರ ವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್. ನೀರುಗಂಟಿಗಳು, ಜವಾನನನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ವೇತನ ನಿಗಧಿಗೊಳಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು, ಕನಿಷ್ಠ ೫೦,೦೦೦ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು. ಗ್ರಾಮ ಪಂಚಾಯತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅವಕಾಶ ನೀಡಿದ್ದು ಸ್ವಾಗತ. ಆದರೆ ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕ ಮಾಡಿಕೊಂಡು ಮುಂದುವರಿಸಬೇಕು. ಅಲ್ಲದೆ ಪಾಟರ್ ಮನ್, ಜವಾನ, ಕಂಪ್ಯೂಟರ್ ಜ್ಞಾನ ಹಾಗು ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.ಐಸಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ತೀವ್ರವಾದ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಗ್ರೇಡ್-೧ ಕಾರ್ಯದರ್ಶಿಗಳಿಂದ ಪಿಡಿಒ ಹುದ್ದೆಗೆ ರಾಜ್ಯಮಟ್ಟನಲ್ಲಿ ನೋಡುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಬಿಲ್ ಕಲೆಕ್ಟರ್ ಮುತ್ತಾ ಗುಮಾಸ್ತ ವೃಂದದಿಂದ ಗ್ರೇಡ್-೨ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಕೆ.ಸಿ.ಎಸ್.ಆರ್. ೩೨೫ ನಿಯಮಾನುಸಾರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೇ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿ ಲೋಪದೋಷಗಳನ್ನು ಪಂಚಾಯತಿ ತಂತ್ರಾಂಶದಲ್ಲಿ ಸರಿಪಡಿಸುವ ಬಗ್ಗೆ ಸಿಬ್ಬಂದಿಗಳಿಗೆ ಪೂರ್ಣ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅಯ್ಯಪ್ಪ ಬಾಗೇವಾಡಿ, ಜಿಲ್ಲಾ ಉಪಾಧ್ಯಕ್ಷ ಮಲ್ಲಪ್ಪ ಚಳಗಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ವಾಲಿ, ಖಜಾಂಚಿ ಲಾಲ ಅಹ್ಮದ್ ಶೇಕ್, ಶಿವಾನಂದ ಬಿರಾದಾರ್ , ಅಬ್ದುಲ್ ರಜಾದ್ ತಮದಡ್ಡಿ, ಮಲ್ಲಿಕಾರ್ಜುನ್ ಮಾದರ್, ನಾರಾಯಣ ಬಡಿಗೇರ, ಸಂಗಪ್ಪ ಗಂಗಶೆಟ್ಟಿ, ಹೂವನ್ ಪೂಜಾರಿ ಮುಂತಾದವರು ಇದ್ದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್