ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹರೀಶ್‌ ಗೌಡ

KannadaprabhaNewsNetwork |  
Published : Oct 12, 2025, 01:00 AM IST
11 | Kannada Prabha

ಸಾರಾಂಶ

15 ಮಂದಿ ನಿರ್ದೇಶಕರ ಚುನಾವಣೆಯಲ್ಲಿ 13 ಮಂದಿ ಅವಿರೋಧ, ಎರಡುಸ್ಥಾನಗಳಿಗೆ ಮತದಾನ

ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲೆಯ ಸಹಕಾರ ಸಂಘಗಳ ಮಾತೃ ಸಂಸ್ಥೆಯಾದ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ, ಉಪಾಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು.ನಗರದ ಚಾಮರಾಜ ಜೋಡಿ ರಸ್ತೆಯ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಿ.ಡಿ. ಹರೀಶ್ ಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎನ್. ಸದಾನಂದ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರವನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿ, ಅವಿರೋಧ ಆಯ್ಕೆ ಆಗಿರುವುದಾಗಿ ಘೋಷಿಸಿ, ಅಭಿನಂದಿಸಿದರು.ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಯ 15 ಮಂದಿ ನಿರ್ದೇಶಕರ ಚುನಾವಣೆಯಲ್ಲಿ 13 ಮಂದಿ ಅವಿರೋಧ, ಎರಡುಸ್ಥಾನಗಳಿಗೆ ಮತದಾನ ನಡೆದು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿಪತ್ತಿನ ಸಂಘಗಳ ಕ್ಷೇತ್ರ ಹಾಗೂ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕುಗಳ ಕ್ಷೇತ್ರದಿಂದ ಪಿರಿಯಾಪಟ್ಟಣ ತಾಲೂಕಿನಿಂದ ಕೆ. ಕುಮಾರ, ಮೈಸೂರು ತಾಲೂಕಿನಿಂದ ಶಾಸಕ ಜಿ.ಟಿ. ದೇವೇಗೌಡ, ಟಿ. ನರಸೀಪುರ ತಾಲೂಕಿನಿಂದ ಮಲ್ಲಣ್ಣ, ನಂಜನಗೂಡು ತಾಲೂಕಿನಿಂದ ಬಿ.ಎನ್. ಸದಾನಂದ, ಸಾಲಿಗ್ರಾಮ ತಾಲ್ಲೂಕಿನಿಂದ ಎ.ಟಿ. ಸೋಮಶೇಖರ್, ಹುಣಸೂರು ಪಟ್ಟಣದಿಂದ ಶಾಸಕ ಜಿ.ಡಿ. ಹರೀಶ್ ಗೌಡ, ಹುಣಸೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಎಸ್. ಕುಮಾರ, ಮೈಸೂರು ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ. ಉಮಾಶಂಕರ್, ಪಟ್ಟಣ ಸಹಕಾರ ಬ್ಯಾಂಕುಗಳ ಕ್ಷೇತ್ರದಿಂದ ಕುವೆಂಪುನಗರದ ಆರ್. ಆನಂದ್, ಟಿಎಪಿಸಿಎಂಎಸ್ ಹಾಗೂ ಮಾರಾಟ ಸಹಕಾರ ಸಂಘಗಳು ಹಾಗೂ ಬಳಕೆದಾರರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜಿ. ಮಹೇಶ್, ಗೃಹ ನಿರ್ಮಾಣ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ವಿ. ರಾಜೀವ್, ಮಹಿಳಾ ಸಹಕಾರ ಸಂಘಗಳ ಕ್ಷೇತ್ರದಿಂದ ಎ. ಶಿವಗಾಮಿ, ಎಸ್ಸಿ, ಎಸ್ಟಿ ಸಹಕಾರ ಸಂಘಗಳ ಕ್ಷೇತ್ರದಿಂದ ಜಿ.ವಿ. ಗುರುರಾಜು ಅವಿರೋಧವಾಗಿ ಆಯ್ಕೆಯಾಗಿದ್ದರು.ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಎಸ್. ಪ್ರಶಾಂತ್ ತಾತಾಚಾರ್, ವಿವಿದೋದ್ದೇಶ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಟಿ. ನರಸೀಪುರ ತಾಲೂಕಿನ ಸಿದ್ದೇಗೌಡ ಗೆಲುವು ಸಾಧಿಸಿದ್ದರು.ಸಹಕಾರ ಕ್ಷೇತ್ರ ಉಳಿದರೆ ರೈತರು ಉಳಿಯುತ್ತಾರೆ. ನಿರ್ದೇಶಕರ ಅಪೇಕ್ಷೆಯಂತೆ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ರೈತರು, ಸಹಕಾರಿಗಳ ಪರವಾಗಿ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಾಗುವುದು. ಸಹಕಾರಿಗಳಿಗೆ ಸವಲತ್ತು ಒದಗಿಸುವುದು ಮುಖ್ಯ ಎಂದು ನೂತನ ಅಧ್ಯಕ್ಷ ಹಾಗೂ ಶಾಸಕ ಜಿ.ಡಿ. ಹರೀಶ್‌ಗೌಡ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌