ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕುಪ್ನಳ್ಳಿ ಬೈರಪ್ಪ ಮುಖ್ಯ ಅತಿಥಿಯಾಗಿ ಮಾತನಾಡಿ, ಕನ್ನಡ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗದ ಅವಕಾಶಗಳಿದ್ದು, ಸರ್ಕಾರದ ಎಲ್ಲಾ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಕನ್ನಡ ಸಾಮಾನ್ಯ ಪತ್ರಿಕೆಯಾಗಿ, ಕಡ್ಡಾಯ ಕನ್ನಡ ಪತ್ರಿಕೆಯಾಗಿ ಹಾಗೂ ಮುಖ್ಯ ಪತ್ರಿಕೆಯಾಗಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಪಠ್ಯಕ್ರಮಗಳಿವೆ. ವಿದ್ಯಾರ್ಥಿಗಳು ಆಳವಾದ ಅಧ್ಯಯನ ಮಾಡಿ ಜ್ಞಾನವನ್ನು ಪಡೆದುಕೊಂಡು ಗುರಿ ತಲುಪಬೇಕು ಎಂದರು.
ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಶ್ರಮ ಹಾಗೂ ಭವಿಷ್ಯದ ಬಗೆಗೆ ನಿಖರವಾದ ಯೋಜನೆಗಳಿದ್ದರೆ ಯಶಸ್ವಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಯ ಸಂಗತಿಯಾಗಿದೆ ಎಂದರು. ಸನ್ಮಾನ ಸ್ವೀಕರಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಚಂದನ, ತರಗತಿಗಳಲ್ಲಿ ಉತ್ತಮ ಗುಣಮಟ್ಟದ ಬೋಧನೆ, ಗುರುಗಳ ಮಾರ್ಗದರ್ಶನ ಹಾಗೂ ಇಲ್ಲಿನ ಗ್ರಂಥಾಲಯ ನನ್ನ ಸಾಧನೆಗೆ ಸ್ಪೂರ್ತಿಯಾಯಿತು ಎಂದರು.ಕನ್ನಡ ವಿಭಾಗದ ಮುಖ್ಯಸ್ಥ ಬಸವಣ್ಣ ಮೂಕಹಳ್ಳಿ, ಜಾನಪದ ವಿಭಾಗದ ಮುಖ್ಯಸ್ಥ ಡಾ ಶಿವರಾಜು, ಉಪನ್ಯಾಸಕರಾದ ಡಾ. ಮಹೇಶ್ ಬಾಬು, ಬಿ.ಗುರುರಾಜು, ಪಿ.ರಾಣಿ, ಡಾ.ಆರ್. ಶಶಿಕಲಾ, ಡಾ.ಜಗದೀಶ್, ಡಾ.ಆರ್.ಮಹೇಶ್, ಚಿನ್ನದ ಪದಕ ವಿಜೇತರಾದ ತೇಜಸ್ವಿನಿ ಆರ್, ಮಣಿಕಂಠ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.