ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

Published : Dec 22, 2025, 10:54 AM IST
Chamarajanagar

ಸಾರಾಂಶ

ಚಿನ್ನದ ನಿಕ್ಷೇಪ ಸಿಗುತ್ತದೆ ಎಂಬ ಆಸೆಗೆ ಕೆಲ ಕಿಡಿಗೇಡಿಗಳು ಅಂದಾಜು 1 ಎಕರೆ ಸರ್ಕಾರಿ ಗುಡ್ಡವನ್ನೇ ಅಗೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

 ಹನೂರು :  ಚಿನ್ನದ ನಿಕ್ಷೇಪ ಸಿಗುತ್ತದೆ ಎಂಬ ಆಸೆಗೆ ಕೆಲ ಕಿಡಿಗೇಡಿಗಳು ಅಂದಾಜು 1 ಎಕರೆ ಸರ್ಕಾರಿ ಗುಡ್ಡವನ್ನೇ ಅಗೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಜಿಎಸ್ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಕುರಿತು ಅಧ್ಯಯನ

ತಾಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲು ಜಿಎಸ್ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಕುರಿತು ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಗುಡ್ಡ ಅಗೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಖನಿಜ ನಿಕ್ಷೇಪಗಳ ಲಭ್ಯತೆ ಬಗ್ಗೆ ಸಮೀಕ್ಷೆ

ಕೆಲ ದಿನಗಳ ಹಿಂದೆಯಷ್ಟೇ ಜಿಯೋಲಾಜಿಕಲ್‌ ಸರ್ವೇ ಆಫ್ ಇಂಡಿಯಾ ಅಧಿಕಾರಿಗಳು ರಾಜ್ಯದ ನಾನಾ ಭಾಗಗಳಲ್ಲಿ ಖನಿಜ ನಿಕ್ಷೇಪಗಳ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸಿದ್ದರು. ಅದರಂತೆ ಹನೂರಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲು ಸಹ ನಿಕ್ಷೇಪಗಳ ಕುರಿತು ಅಧ್ಯಯನ ಕೈಗೊಂಡಿದ್ದರು.

ಇದರ ಮಾಹಿತಿ ಅರಿತ ಕಿಡಿಗೇಡಿಗಳು ಗುಡ್ಡವನ್ನು ಅಗೆದಿದ್ದಾರೆ. ಈ ಕೃತ್ಯ ಎಸೆಗಿದವರು ಯಾರೆಂದು ಪೊಲೀಸರು ತನಿಖೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

PREV
Get the latest news from Chamarajanagar district (ಚಾಮರಾಜನಗರ ಸುದ್ದಿ) — covering local developments, environment and wildlife, civic issues, politics, culture, tourism, agriculture and community stories. Stay updated with timely headlines and in-depth coverage from Chamarajanagar on Kannada Prabha.
Read more Articles on

Recommended Stories

ತಂತಿ ಬೇಲಿ ನೆಗೆದು 4 ಹಸು ಬಲಿ ಪಡೆದ ಚಿರತೆ
ಕೊಳ್ಳೇಗಾಲ ಗ್ರಾಮ ಅತ್ಯಂತ ಪವಿತ್ರ ಸ್ಥಳ