ಪಾನ್‌ ಮಸಾಲ ಬ್ಯಾನ್‌ನಿಂದ ಅಡಕೆ ಬೆಳೆಗಾರರಿಗೆ ನಷ್ಟ ಇಲ್ಲ: ಖಾದರ್‌

Published : Aug 16, 2026, 11:36 AM IST
UT Khader

ಸಾರಾಂಶ

ಪಾನ್‌ ಮಸಾಲದಲ್ಲಿ ನಿಕೋಟಿನ್‌, ತಂಬಾಕು ಹಾಗೂ ಗುಟ್ಕಾ ಮಿಶ್ರಣ ಮಾಡಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಶುದ್ಧ ಪಾನ್‌ ಮಸಾಲ ಪ್ರತ್ಯೇಕವಾಗಿ ಬಂದರೆ ಯಾವುದೇ ತೊಂದರೆ ಇಲ್ಲ

ಮಂಗಳೂರು : ಪಾನ್‌ ಮಸಾಲದಲ್ಲಿ ನಿಕೋಟಿನ್‌, ತಂಬಾಕು ಹಾಗೂ ಗುಟ್ಕಾ ಮಿಶ್ರಣ ಮಾಡಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಶುದ್ಧ ಪಾನ್‌ ಮಸಾಲ ಪ್ರತ್ಯೇಕವಾಗಿ ಬಂದರೆ ಯಾವುದೇ ತೊಂದರೆ ಇಲ್ಲ

ಆದರೆ ಶುದ್ಧ ಪಾನ್‌ ಮಸಾಲ ಪ್ರತ್ಯೇಕವಾಗಿ ಬಂದರೆ ಯಾವುದೇ ತೊಂದರೆ ಇಲ್ಲ. ಈ ಕ್ರಮದಿಂದ ಅಡಕೆ ಬೆಳೆಗಾರರಿಗೆ ಯಾವುದೇ ನಷ್ಟವಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್‌ ಪುನರುಚ್ಚರಿಸಿದ್ದಾರೆ.

2014ರಲ್ಲಿ ನಾನು ಗುಟ್ಕಾ ನಿಷೇಧ

ಮಂಗಳೂರು ನೆಹರೂ ಮೈದಾನದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 2014ರಲ್ಲಿ ನಾನು ಗುಟ್ಕಾ ನಿಷೇಧಿಸಿದಾಗಲೂ ಅಡಕೆ ಬೆಲೆ ಇಳಿಕೆಯಾಗಲಿದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಆ ಬಳಿಕ ಅಡಕೆ ಧಾರಣೆ ಜಾಸ್ತಿಯಾಯಿತೇ ಹೊರತು ಕಡಿಮೆಯಾಗಲಿಲ್ಲ. ಈಗಲೂ ಅಡಕೆ ಬೆಳೆಗಾರರಿಗೆ ಅಥವಾ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.

PREV
Get the latest news from Chamarajanagar district (ಚಾಮರಾಜನಗರ ಸುದ್ದಿ) — covering local developments, environment and wildlife, civic issues, politics, culture, tourism, agriculture and community stories. Stay updated with timely headlines and in-depth coverage from Chamarajanagar on Kannada Prabha.
Read more Articles on

Recommended Stories

ಅರಣ್ಯದಲ್ಲಿ ಎನ್‌ಕೌಂಟರ್‌: ರೊಚ್ಚಿಗೆದ್ದ ಹನೂರು ಜನ
ಚಾಮರಾಜನಗರ : ಅರಣ್ಯ ಸಿಬ್ಬಂದಿ ಗುಂಡಿಗೆ 3 ಬೇಟೆಗಾರರು ಬಲಿ