ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ

KannadaprabhaNewsNetwork |  
Published : Dec 19, 2023, 01:45 AM IST
 ಸುಬ್ರಹ್ಮಣ್ಯ ದೇವರು | Kannada Prabha

ಸಾರಾಂಶ

ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಹೊನ್ನಾವರ:

ತಾಲೂಕಿನ ಪುರಾಣ ಪ್ರಸಿದ್ಧ ನಾಗಾರಾಧನೆಯ ಪುಣ್ಯ ತಾಣ ಎಂದೇ ಪ್ರಸಿದ್ಧಿ ಹೊಂದಿರುವ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಸೋಮವಾರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಸೋಮವಾರ ವಿಜೃಂಭಣೆಯಿಂದ ನೆರವೇರಿತು.

ದೇವಾಲಯದಲ್ಲಿ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಭಕ್ತರಿಂದ ಹಣ್ಣು-ಕಾಯಿ ಸೇವೆ, ಅರ್ಚನೆ, ಆರತಿ, ಅಭಿಷೇಕ, ಸರ್ವ ಸೇವೆ, ಅಪೂಪ ಸೇವೆ, ಪಂಚಖಾದ್ಯ ಸೇವೆ, ಲಾಡು ಪ್ರಸಾದ ಸೇವೆ ಸೇರಿದಂತೆ ವಿವಿಧ ಸೇವೆ ಸಲ್ಲಿಸಿದರು. ಸಮೀಪದ ನಾಗಬನದಲ್ಲಿರುವ ನಾಗ ದೇವರಿಗೆ ಕ್ಷೀರಾಭಿಷೇಕ, ಆರತಿ ಮತ್ತು ಫಲಾಭಿಷೇಕ ಸೇರಿದಂತೆ ವಿವಿಧ ಸೇವೆ ಸಲ್ಲಿಸಲಾಯಿತು. ಬೆಳಗ್ಗೆ 6ರಿಂದ ರಾತ್ರಿ 8.30ರ ವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ದರ್ಶನ ಪಡೆಯುವುದಕ್ಕಾಗಿ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಹಾಗೂ ಪಾನಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಚಿವ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ, ಜನಪ್ರತಿನಿಧಿಗಳು ಅಧಿಕಾರಿಗಳು ಸೇರಿದಂತೆ ನಾಡಿನ ಮೂಲೆಮೂಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಎಸ್.ಆರ್. ಹೆಗಡೆ ಮಾತನಾಡಿ, ಪ್ರತಿ ಬಾರಿಯಂತೆ ಸಕಲ ಸಿದ್ಧತೆಯೊಂದಿಗೆ ಅದ್ಧೂರಿಯಾಗಿ ಚಂಪಾ ಷಷ್ಠಿ ಉತ್ಸವ ನಡೆಯುತ್ತಿದ್ದು, ವಿವಿಧ ಸೇವಾ ಕಾರ್ಯಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ