ಗುತ್ತಿಗೆದಾರ ಮಧು ಎಂಬುವರಿಂದ ರು. 25,000 ಲಂಚ ಪಡೆಯಲು ಯತ್ನಿಸುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ತಂಡ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದೆ. ಮಂಜುನಾಥ್ ವಿರುದ್ಧ ಲಂಚದ ಬೇಡಿಕೆ ಸಂಬಂಧಿಸಿದಂತೆ ಹಿಂದೆಯೂ ಹಲವು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಮಧು ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಸಿದ ನಂತರ, ಪೂರ್ವಯೋಜಿತ ಕಾರ್ಯಾಚರಣೆ ನಡೆಸಿ ಇಂದು ಬೆಳಿಗ್ಗೆ ಲಂಚ ಪಡೆವಾಗ ಸಮಯದಲ್ಲೇ ಆರೋಪಿಯನ್ನು ಹಿಡಿಯಲಾಗಿದೆ. ಮಂಜುನಾಥ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅರಸೀಕೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಣಕ ಎಂಜಿನಿಯರ್ (ಎಇಇ) ಮಂಜುನಾಥ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಗುತ್ತಿಗೆದಾರ ಮಧು ಎಂಬುವರಿಂದ ರು. 25,000 ಲಂಚ ಪಡೆಯಲು ಯತ್ನಿಸುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ತಂಡ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದೆ. ಮಂಜುನಾಥ್ ವಿರುದ್ಧ ಲಂಚದ ಬೇಡಿಕೆ ಸಂಬಂಧಿಸಿದಂತೆ ಹಿಂದೆಯೂ ಹಲವು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಮಧು ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಸಿದ ನಂತರ, ಪೂರ್ವಯೋಜಿತ ಕಾರ್ಯಾಚರಣೆ ನಡೆಸಿ ಇಂದು ಬೆಳಿಗ್ಗೆ ಲಂಚ ಪಡೆವಾಗ ಸಮಯದಲ್ಲೇ ಆರೋಪಿಯನ್ನು ಹಿಡಿಯಲಾಗಿದೆ.ಸ್ಥಳದಲ್ಲೇ ನಾಟಕೀಯ ಘಟನೆ:
ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದ ತಕ್ಷಣ ಎಇಇ ಮಂಜುನಾಥ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಅವರು ಕುಸಿದು ಬಿದ್ದ ಘಟನೆ ನಡೆಯಿತು. ತಕ್ಷಣವೇ ಲೋಕಾಯುಕ್ತ ಅಧಿಕಾರಿಗಳು ಅವರನ್ನು ನಗರದ ಸರ್ಕಾರಿ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದರು. ಬಳಿಕ, ಲೋಕಾಯುಕ್ತರ ವಾಹನದಲ್ಲೇ ಮಂಜುನಾಥ್ ಅವರನ್ನು ಚಾಮುಂಡೇಶ್ವರಿ ವಿದ್ಯುತ್ ನಿಗಮದ ಕಚೇರಿಗೆ ಕರೆತಂದು ತೀವ್ರ ವಿಚಾರಣೆ ನಡೆಸಲಾಯಿತು.ವಿಚಾರಣೆ ಮುಂದುವರಿಕೆ:
ಘಟನೆಗೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ಹಾಗೂ ವಿಚಾರಣೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಗಳ ಕುರಿತು ವಿಚಾರಣೆ ಪೂರ್ಣಗೊಂಡ ನಂತರ ವಿವರ ನೀಡಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ಸಾರ್ವಜನಿಕ ವಲಯದಲ್ಲಿ ಚರ್ಚೆ:
ಈ ಘಟನೆ ಅರಸೀಕೆರೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿದ್ಯುತ್ ನಿಗಮದಲ್ಲಿ ಇಂತಹ ಭ್ರಷ್ಟಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂಬ ಒತ್ತಾಯ ವ್ಯಕ್ತವಾಗಿದ್ದು, ಇತರೆ ಭ್ರಷ್ಟ ಅಧಿಕಾರಿಗಳ ಮೇಲೂ ಇದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.