ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗವು ಮಾ.16 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ಸಂಬಂಧಿಸಿದಂತೆ ಉಮೇದು ವಾರರು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಏ.19ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಸಲ್ಲಿಸಬಹುದಾಗಿದೆ. ನಾಮ ಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ನಾಮ ಪತ್ರಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಏ.20ರಂದು ಬೆಳಿಗ್ಗೆ 11ಕ್ಕೆ ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ನಿಗದಿಪಡಿಸಿದ ಕಚೇರಿಯಲ್ಲಿ ಏ.22 ರಂದು ಮಧ್ಯಾಹ್ನ 3ರೊಳಗೆ ಸಲ್ಲಿಸಬಹುದು ಎಂದರು.ಮೇ.7ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮೂಲಕ ಅಗತ್ಯ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಬೇಕು.
ರಾಷ್ಟ್ರೀಯ, ರಾಜ್ಯ ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗೆ ಒಬ್ಬ ಸೂಚಕರು, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷ, ಪಕ್ಷೇತರರಿಗೆ 10 ಸೂಚಕರು ಸಹಿ ಮಾಡಿರಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಜೊತೆಗೆ 4 ಇತರ ಅಧಿಕೃತ ವ್ಯಕ್ತಿಗಳಿಗೆ ಮಾತ್ರ ನಾಮಪತ್ರ ಸ್ವೀಕೃತಿ ಕೇಂದ್ರದಿಂದ 100 ಮೀಟರ್ ಅಂತರದೊಳಗೆ ಪ್ರವೇಶಿಸಲು ಅವಕಾಶವಿರುತ್ತದೆ.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಹಾಜರಿದ್ದರು.