ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸುವಂತೆ ಕುಲಪತಿ ಸೂಚನೆ

KannadaprabhaNewsNetwork |  
Published : Jan 19, 2026, 12:45 AM IST
೧೬ಕೆಎಲ್‌ಆರ್-೧೧ಬೆಂಗಳೂರು ಉತ್ತರ ವಿವಿಯ ಕುಲಪತಿ ಡಾ.ಬಿ.ಕೆ.ರವಿ  ಜಂಗಮಕೋಟೆ ಕ್ರಾಸ್ ಬಳಿ ನೂತನವಾಗಿ ನಿರ್ಮಾಣವಾಗುತಿರುವ ಅಮರಾವತಿ ಕ್ಯಾಂಪಸ್‌ನಲ್ಲಿನ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ವವಿವಿಗೆ ಹಸ್ತಂತರಿಸಲು ಸೂಚನೆ ನೀಡಿದರು. | Kannada Prabha

ಸಾರಾಂಶ

ಅಮರಾವತಿ ಕ್ಯಾಂಪಸ್‌ಗೆ ಭೇಟಿ ನೀಡಿ ಅಲ್ಲಿ ಮುಕ್ತಾಯ ಹಂತದಲ್ಲಿರುವ ವಿವಿಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಬೆಂಗಳೂರು ಉತ್ತರ ವಿವಿಯ ಕುಲಪತಿ ಡಾ.ಬಿ.ಕೆ. ರವಿಯವರು ಜಂಗಮಕೋಟೆ ಕ್ರಾಸ್ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಮರಾವತಿ ಕ್ಯಾಂಪಸ್‌ನಲ್ಲಿನ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ವಿವಿಗೆ ಹಸ್ತಾಂತರಿಸಲು ಸೂಚನೆ ನೀಡಿದರು.

ಅಮರಾವತಿ ಕ್ಯಾಂಪಸ್‌ಗೆ ಭೇಟಿ ನೀಡಿ ಅಲ್ಲಿ ಮುಕ್ತಾಯ ಹಂತದಲ್ಲಿರುವ ವಿವಿಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಬೆಂಗಳೂರು ಉತ್ತರ ವಿವಿ ಅಮರಾವತಿ ಕ್ಯಾಂಪಸ್‌ನಲ್ಲಿ ಉತ್ತಮ ಪರಿಸರದೊಂದಿಗೆ ವಿದ್ಯಾರ್ಥಿ ಸ್ನೇಹಿ ವಾತಾವರಣ ಸೃಷ್ಟಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿಸುವ ಕಾರ್ಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರ ಅಗತ್ಯ, ಶೀಘ್ರ ಕಾಮಗಾರಿ ಮುಗಿದು ಇಲ್ಲೇ ಮುಂದಿನ ಶೈಕ್ಷಣಿಕ ವರ್ಷದಿಂದ ವಿವಿಯ ಕೆಲಸಕಾರ್ಯಗಳು ನಡೆಯಲಿ ಎಂದರು.

168 ಎಕರೆ ಜಾಗ ನಮ್ಮ ಸ್ವಾಧೀನಕ್ಕೆ ಸಿಕ್ಕಿದೆ, ವಿವಿ ಕಾಮಗಾರಿ ಪೂರ್ಣಗೊಳ್ಳುವ ಕಾಲ ಹತ್ತಿರವಾಗಿದೆ, ವಿವಿ ಕ್ಯಾಂಪಸ್‌ ಆರಂಭವಾಗುವಷ್ಟರೊಳಗೆ ಇಲ್ಲಿ ನೆಟ್ಟಿರುವ ಗಿಡಮರಗಳಿಂದ ಕೂಡಿದ ಸುಂದರ ಪರಿಸರ ಕಲಿಕಾರ್ಥಿಗಳನ್ನು ಕೈಬೀಸಿ ಕರೆಯಲಿದೆ ಎಂದರು.

ಉತ್ತಮ ಕಲಿಕೆಗೆ ಸುಂದರ ಪರಿಸರ, ಪೂರಕ ವಾತಾವರಣ ಸೃಷ್ಟಿ ಅಗತ್ಯ, ಬೆಂಗಳೂರು ಉತ್ತರ ವಿವಿಯಲ್ಲಿ ಈ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಿರುವ ಎಲ್ಲಾ ಸಂಯೋಜನೆಗಳನ್ನು ಆರಂಭಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರ ವಿವಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ರಾಮಚಂದ್ರ, ಅಭಿಯಂತರ ಕೌಶಿಕ್, ವಿವಿಯ ಶ್ರೀನಿವಾಸರಾವ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೆಹಲಿ ಭೇಟಿ ವೇಳೆ ಉಪಮುಖ್ಯಮಂತ್ರಿ ನಿಗೂಢ ಹೇಳಿಕೆ
ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ