ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಸಿದ ಅವರು, ಕೃಷ್ಣರಾಜಸಾಗರ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು ಹರಿಸಿ ಜೀವಸಂಕುಲ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಚಂದಗಾಲು ಶಿವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಮಳೆ ಅಭಾವ ಮತ್ತು ಭೀಕರ ಬರಗಾಲದಿಂದ ನೀರಿನ ಕೊರತೆ ಎದುರಾಗಿದೆ. ಕೆರೆಕಟ್ಟೆಗಳೆಲ್ಲ ನೀರಿಲ್ಲದೆ ಒಣಗಿವೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದರು.ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದ್ದರು. ಈಗ ಅವರೇ ಜಲಸಂಪನ್ಮೂಲ ಸಚಿವರಾಗಿದ್ದಾರೆ. ಆದರೂ ನಾಲೆ ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮೌನವಹಿಸಿದ್ದಾರೆ ಎಂದರು.
ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರ ತಮಿಳುನಾಡಿಗೆ ನೀರು ಬಿಟ್ಟು ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಈಗ ನಾಲೆ ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸಿ ಎಂದರೆ ನೀರು ಇಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಆಳುವ ಸರಕಾರದ ಧೋರಣೆಯಿಂದ ಕರ್ನಾಟಕದ ನೀರು ತಮಿಳುನಾಡಿನ ಹಕ್ಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಂದಗಾಲು ಶಿವಣ್ಣ ಉಪವಾಸ ಸತ್ಯಾಗ್ರಹಕ್ಕೆ ಮುಖಂಡರಾದ ಸಿ.ಟಿ ಮಂಜುನಾಥ್, ಕೇಶವ್, ನಿತ್ಯಾನಂದ, ಸಿದ್ದರಾಜುಗೌಡ, ಶಂಕರ್, ಪ್ರಸನ್ನ, ವಿನೋಭ ಹಂಚಹಳ್ಳಿ, ಹೊಸಹಳ್ಳಿ ಶಿವು, ನೆರಳು ಕೃಷ್ಣ ಹಲವರು ಬೆಂಬಲ ಸೂಚಿಸಿ ಪಾಲ್ಗೊಂಡರು. ಬರದಿಂದ ತತ್ತರಿಸಿರುವ ಜನರಿಗೆ ಸೂಕ್ತ ಪರಿಹಾರ ರೂಪಿಸಿ: ಎನ್ .ಎಲ್ .ಭರತ್ ರಾಜ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂದೂ ಕಂಡರಿಯದ ಬರ ತಲೆದೋರಿದೆ. ಬರದಿಂದ ಜನತೆ ತತ್ತರಿಸಿದ್ದಾರೆ. ನಮ್ಮನ್ನಾಳುವ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿದರು.ಜಿಲ್ಲೆಯಲ್ಲಿ ಕಬ್ಬು, ರೇಷ್ಮೆ, ಭತ್ತ, ರಾಗಿ, ಜೋಳ ಇತರೆ ಬೆಳೆಗಳು ನೀರಿಲ್ಲದೆ ಒಣಗಿವೆ. ಭೂಮಿಗೆ ಬಿತ್ತನೆ ಹಾಕಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಖರ್ಚು ಮಾಡಿದ ಹಣವೂ ಬಂದಿಲ್ಲ. ಸರ್ಕಾರಗಳು ಸೂಕ್ತ ಪರಿಹಾರ ರೂಪಿಸಿಲ್ಲ. ತಕ್ಷಣ ಕನಿಷ್ಠ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಹಸು-ಎಮ್ಮೆಗಳು ಬಿಸಿಲಿನ ಝಳಕ್ಕೆ ಅನಾರೋಗ್ಯಕ್ಕೆ ತುತ್ತಾಗುತ್ತಿವೆ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಿಂಗರಾಜಮೂರ್ತಿ, ಟಿ.ಎಸ್. ಸಿದ್ದೇಗೌಡ, ಗುರುಸ್ವಾಮಿ, ಸತೀಶ್, ರಾಮಣ್ಣ ಇದ್ದರು.