ಚಂದ್ರಗುತ್ತಿ ರೇಣುಕಾಂಬಾ ದೇವಿ ಓಕಳಿ ಉತ್ಸವ ಸಂಪನ್ನ

KannadaprabhaNewsNetwork |  
Published : Mar 22, 2024, 01:11 AM IST
ಫೋಟೋ:೨೧ಕೆಪಿಸೊರಬ-೦೧ : ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಉತ್ಸವ ಮೂರ್ತಿಯನ್ನು ಗ್ರಾಮದ ನಾಲ್ಕು ಕಾಲು ಮಂಟಪದ ಭವ್ಯ ಸಿಂಹಾಸನದ ಮೇಲೆ ಪ್ರತಿಷ್ಠಾಪಿಸಿ ಓಕುಳಿ ಉತ್ಸವ ನಡೆಸಲಾಯಿತು. | Kannada Prabha

ಸಾರಾಂಶ

ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿಉತ್ಸವ ಮೆರವಣಿಗೆ ಗ್ರಾಮದ ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಪುಷ್ಪಗಳಿಂದ ಅಲಂಕರಿಸಿದ ನಾಲ್ಕು ಕಾಲು ಮಂಟಪದಲ್ಲಿ ಸಿಂಹಾಸನದ ಮೇಲೆ ಶ್ರೀದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಭಕ್ತರು ತುಲಾಭಾರ ಸೇವೆ ಸೇರಿ ವಿವಿಧ ರೀತಿಯ ಹರಕೆ ಸೇವೆಗಳ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಂದ್ರಗುತ್ತಿ ಶ್ರೀರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವ ಪ್ರಯುಕ್ತ ಅವಭ್ರುಥೋತ್ಸವ ಓಕಳಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ದೇವಾಲಯದಿಂದ ಶ್ರೀರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಓಕಳಿ ಕಟ್ಟೆಗೆ ತೆರಳಿ ಭಕ್ತರ ಸಮೂಹದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಕುಂಕುಮದ ನೀರು ಎರಚುವ ಮೂಲಕ ಓಕಳಿ ಆಡಿದರು. ಭಕ್ತರು ಚಂದ್ರಗುತ್ಯಮ್ಮ ನಿನ್ನಾಲ್ಕು ಉದೋ.. ಉದೋ… ಎಲ್ಲಮ್ಮ ನಿನ್ನಾಲ್ಕು ಉದೋ… ಉದೋ… ಎಂಬ ಘೋಷಣೆಯೊಂದಿಗೆ ಭಕ್ತಿ ಸ್ಮರಣೆಯಲ್ಲಿ ಮಿಂದೆದ್ದರು.

ಜಾತ್ರಾ ಮಹೋತ್ಸವದ ಮೂರನೇ ದಿನದ ಅವಭ್ರುಥೋತ್ಸವ ಓಕಳಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಚಾಲನೆ ನೀಡಿದರು.

ನಂತರ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿಉತ್ಸವ ಮೆರವಣಿಗೆ ಗ್ರಾಮದ ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಪುಷ್ಪಗಳಿಂದ ಅಲಂಕರಿಸಿದ ನಾಲ್ಕು ಕಾಲು ಮಂಟಪದಲ್ಲಿ ಸಿಂಹಾಸನದ ಮೇಲೆ ಶ್ರೀದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಭಕ್ತರು ತುಲಾಭಾರ ಸೇವೆ ಸೇರಿ ವಿವಿಧ ರೀತಿಯ ಹರಕೆ ಸೇವೆಗಳ ಸಲ್ಲಿಸಿದರು.

ಚಂದ್ರಗುತ್ತಿಯ ಶ್ರೀರೇಣುಕಾಂಬಾ ದೇವಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿದ್ದು, ಭಕ್ತರಿಗೆ ಮೂಲ ಸೌಕರ್ಯ, ಕುಡಿಯುವ ನೀರು ವ್ಯವಸ್ಥೆ ಮಾಡಲಾಗಿತ್ತು. ಜಾತ್ರಾ ಮಹೋತ್ಸವಕ್ಕೆ ತಾಲೂಕು ಆಡಳಿತ, ಸ್ಥಳೀಯ ಗ್ರಾಪಂ ಸೇರಿ ವಿವಿಧ ಸಂಘ ಸಂಸ್ಥೆ ಹಾಗೂ ಪೊಲೀಸರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದವರಿಗೆ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಕೃತಜ್ಞತೆಗಳ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!