ಪ್ರದ್ಯುಮ್ನ ರಾವ್‌ಗೆ ಚಂದ್ರಶೇಖರ ಸ್ವಾಮೀಜಿ ಗೌರವಾರ್ಪಣೆ

KannadaprabhaNewsNetwork |  
Published : Aug 08, 2026, 02:45 AM IST
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರ ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ  ಪ್ರದ್ಯುಮ್ನ ರಾವ್ ಶಿಬರೂರುಗೆ ಶ್ರೀ ಚಂದ್ರಶೇಖರ ಸ್ವಾಮೀಜಿಯಿಂದ ಗೌರವಾರ್ಪಣೆ  | Kannada Prabha

ಸಾರಾಂಶ

ಧರ್ಮ, ಸಂಸ್ಕೃತಿ ಹಾಗೂ ಸೇವಾ ಮನೋಭಾವ ಹೊಂದಿದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಸನಾತನ ಧರ್ಮದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಆಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಮೂಲ್ಕಿ: ಧರ್ಮ, ಸಂಸ್ಕೃತಿ ಹಾಗೂ ಸೇವಾ ಮನೋಭಾವ ಹೊಂದಿದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಸನಾತನ ಧರ್ಮದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಆಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಮೂಲ್ಕಿ ಗೇರುಕಟ್ಟೆಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ದೇವಾಲಯಗಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ, ಶ್ರೀ ಕೊಡಮಣಿತ್ತಾಯ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರದ್ಯುಮ್ನ ರಾವ್ ಶಿಬರೂರು ಅವರನ್ನು ಸನ್ಮಾನಿಸಿ ಮಾತನಾಡಿದರು.

ಸಮಾಜ ಸೇವಕ ಸುರೇಶ್ ಶೆಟ್ಟಿ ಸೂರಿಂಜೆ, ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖ‌ರ್, ಯುವ ಉದ್ಯಮಿ ರಾಹುಲ್ ಚಂದ್ರಶೇಖರ್, ಹರಿಪ್ರಸಾದ್ ಮಂಗಳೂರು, ನಿರ್ದೇಶಕ ರಾಘವ ಸೂರ್ಯ, ಕಾನೂನು ಸಲಹೆಗಾರರಾದ ರೋಶಿನಿ ರಾಘವ್ ಸೂರ್ಯ ಹಾಗೂ ಆಶ್ರಮದ ಸಂಚಾಲಕ ಪುನಿತ್ ಕೃಷ್ಣ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಸಿ, ಎಸ್‌ಟಿ ಮೀಸಲು ಮಸೂದೆ ೯ನೇ ಶೆಡ್ಯೂಲ್‌ಗೆ ಸೇರಿಸಿ: ಉಗ್ರಪ್ಪ
ಸಚಿವ ಸ್ಥಾನ ಭರವಸೆ ಈಡೇರಿಸದ ಕಾಂಗ್ರೆಸ್‌: ಸುರೇಶ್ ಆರೋಪ