ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಎಸ್ಪಿ ಅಮರನಾಥರೆಡ್ಡಿ

KannadaprabhaNewsNetwork |  
Published : Feb 20, 2024, 01:47 AM IST
ಪೋಟೊ:19 ಜಿಎಲ್ಡಿ1- ಗುಳೇದಗುಡ್ಡ  ಪಟ್ಟಣದ ನೆಹರು ಪಬ್ಲಿಕ್ ಶಾಲೆಯ ವಾರ್ಷಿಕ  ಸಮಾರಂಭವನ್ನು ಜಿಲ್ಲಾ ಎಸ್ಪಿ  ಅಮರನಾಥರೆಡ್ಡಿ  ಹಾಗೂ ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಗುಳೇದಗುಡ್ಡ: ಪಟ್ಟಣದ ನೆಹರು ಪಬ್ಲಿಕ್ ಶಾಲೆ ಹಾಗೂ ಪಪೂ ಕಾಲೇಜಿನ ವಾರ್ಷಿಕ ಸಮಾರಂಭ ಉದ್ಘಾಟಿಸಿದ ಎಸ್ಪಿ ಅಮರನಾಥರೆಡ್ಡಿ ಮಾತನಾಡಿ, ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವುದರಿಂದ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ಧಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದುತಂತ್ರಜ್ಞಾನದಲ್ಲಿ ಸಾಕಷ್ಟು ಆವಿಷ್ಕಾರಗಳು ನಿತ್ಯ ಕಂಡು ಬರುತ್ತಿವೆ. ಶಿಕ್ಷಣ ಸಂಸ್ಥೆಗಳು ಅವುಗಳನ್ನು ಬಳಸಿಕೊಂಡಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವುದರಿಂದ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ಧಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಜಿಲ್ಲಾ ಎಸ್ಪಿ ಅಮರನಾಥರೆಡ್ಡಿ ಹೇಳಿದರು.

ಪಟ್ಟಣದ ನೆಹರು ಪಬ್ಲಿಕ್ ಶಾಲೆ ಹಾಗೂ ಪಪೂ ಕಾಲೇಜಿನ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿ, ತಂತ್ರಜ್ಞಾನದಲ್ಲಿ ಸಾಕಷ್ಟು ಆವಿಷ್ಕಾರಗಳು ನಿತ್ಯ ಕಂಡು ಬರುತ್ತಿವೆ. ಶಿಕ್ಷಣ ಸಂಸ್ಥೆಗಳು ಅವುಗಳನ್ನು ಬಳಸಿಕೊಂಡಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಶಿಕ್ಷಣ ಸಂಸ್ಥೆಗಳು ಮತ್ತು ಪಾಲಕರು ವಿದ್ಯಾವಂತರಾಗಿ ಮಾಡಬೇಕು. ಮಕ್ಕಳನ್ನೇ ಆಸ್ತಿಯನ್ನಾಗಿ ಭಾವಿಸಿ ಅವರಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಎಂದು ಪಾಲಕರಿಗೆ ಹೇಳಿದರು.

ಬಾದಾಮಿ ನವಗ್ರಹ ಹಿರೇಮಠದ ಶಿವಪೂಜಿ ಶ್ರೀಗಳು, ರೋಣದ ವಿಶ್ವನಾಥ ಬೂದಿಶ್ವರ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ, ಅಧ್ಯಕ್ಷ ಮಹಾಂತೇಶ ಸರಗಣಾಚಾರಿ, ಪವನ ಸೀಮಿಕೇರಿ, ಸಂಗನಬಸಪ್ಪ ಚಿಂದಿ, ವಿರೇಶ ಚಿಂದಿ, ಮಾಣಿಕಸಾ ಕಾವಡೆ, ರಾಜುಶೆಟ್ಟರ, ಚಂದ್ರು ಪಟ್ಟಣಶೆಟ್ಟಿ, ಸಿಬಿಸಿಇ ಶಾಲೆ ಮುಖ್ಯಶಿಕ್ಷಕ ಬಸವರಾಜು, ಪಿ.ಯು. ಕಾಲೇಜು ಪ್ರಾಚಾರ್ಯ ಮುತ್ತುರಾಜ ಕುಬಕಡ್ಡಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ