ಹಾಸನದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್

KannadaprabhaNewsNetwork |  
Published : Apr 11, 2024, 12:45 AM ISTUpdated : Apr 11, 2024, 12:40 PM IST
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಅವರಿಂದ ಜಿಲ್ಲೆಯಲ್ಲಿ ಮತಯಾಚನೆ. | Kannada Prabha

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮತಯಾಚನೆ ಮಾಡಿದ ನಂತರ ಮಾತನಾಡಿದರು.

 ಹಾಸನ :  ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಮತಯಾಚನೆ ಮಾಡಿದ ನಂತರ ಮಾತನಾಡಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ

ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ‘ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ ತನ್ನಿ ಎಂದು ಎಲ್ಲರಲ್ಲಿ ಮನವಿ ಮಾಡಿದ್ದೇನೆ. ಒಮ್ಮೆ ನನಗೆ ಅವಕಾಶ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ಹೇಳಿದರು.

‘ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ ನಾವು ಗೆಲ್ಲುತ್ತೇವೆ. ಏ.15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೂರಿಗೆ ಬರುತ್ತಿದ್ದು, ಏ.18 ರಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು ಸೇರಿದಂತೆ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದು, ಒಂದೊಂದೆಡೆ ರೋಡ್ ಶೋ, ಮತ್ತೊಂದೆಡೆ ಬಹಿರಂಗ ಸಭೆ ಇದ್ದು, ಒಂದೇ ದಿನದಲ್ಲಿ ಏಳು ವಿಧಾನಸಭಾ ಕ್ಷೇತ್ರದ ಪ್ರಚಾರ ಮುಗಿಸಲಿದ್ದಾರೆ. ನಮಗೆ ಒಂದು ದಿನ ಚುನಾವಣೆ ಪ್ರಚಾರಕ್ಕೆ ಬಂದರೆ ಸಾಕು’ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ಭೇಟಿ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ‘ಪ್ರತಿ ತಿಂಗಳು ಅಮವಾಸ್ಯೆ ಪೂಜೆಗೆ ದೊಡ್ಡಗದ್ದವಳ್ಳಿ ದೇವಸ್ಥಾನಕ್ಕೆ ಹೋಗುತ್ತೇನೆ. ಈ ವೇಳೆ ಪಕ್ಷಾತೀತವಾಗಿ ಎರಡು, ಮೂರು ಸಾವಿರ ಜನ ಇದ್ದರು. ಅಂದು ಬೆಳಿಗ್ಗೆ ಹೋದಾಗ ಅವರು ಬಂದರು. ನಾನು ಸಹಾಯ ಮಾಡಿ ಎಂದು ಮತಯಾಚಿಸಿದೆ. ಅವರು ನಗತ್ತಲೇ ಹೋದರು. ಗುಂಪಿನಲ್ಲಿದ್ದಾಗ ಒಂದು ಫೋಟೋ ತೆಗೆದುಕೊಂಡರು. ಅದು ಬಿಟ್ಟರೆ ನಾನು ಹೋಗಿದ್ದು, ಅವರು ಅಲ್ಲಿ ಇದ್ದದ್ದು ಆಕಸ್ಮಿಕ. ನಾನು ಬಿಜೆಪಿಯ ಯಾರನ್ನು ಭೇಟಿ ಮಾಡಿಲ್ಲ. ಅದೆಲ್ಲಾ ಸುಳ್ಳು. ನಾನು ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದವರನ್ನು ಭೇಟಿ ಮಾಡಿದ್ದೀನಿ. ಸುಮ್ನೆ ವೈಯುಕ್ತಿಕವಾಗಿ ಯಾರ ಮೇಲೂ ಮಾತನಾಡಬಾರದು’ ಎಂದು ಉತ್ತರಿಸಿದರು.

ಇದೇ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮುಖಂಡರಾದ ವಿನಯ್ ಗಾಂಧಿ, ಮುನಿಸ್ವಾಮಿ, ಪ್ರಸನ್ನ ಕುಮಾರ್, ಗಿರೀಶ್ ಇತರರು ಇದ್ದರು.

ಹಾಸನದ ವಕೀಲರ ಸಂಘದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರಿಂದ ಮತಯಾಚನೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ