ಅಕ್ಷರದ ಅರಿವು ಮೂಡಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ. ವಿಜಯಮಹಾಂತೇಶ ದಾನಮ್ಮನವರ

KannadaprabhaNewsNetwork |  
Published : Apr 16, 2026, 02:15 AM IST
ಹಾವೇರಿ ವಿಶ್ವೇಶ್ವರತೀರ್ಥ ನಗರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಏರ್ಪಡಿಸಿದ್ದ ಗ್ರಂಥಾಲಯ ಅನುಷ್ಠಾನದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ವಿಶ್ವೇಶ್ವರತೀರ್ಥ ನಗರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಏರ್ಪಡಿಸಿದ್ದ ಗ್ರಂಥಾಲಯ ಅನುಷ್ಠಾನದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಪಾಲ್ಗೊಂಡಿದ್ದರು.

ಹಾವೇರಿ: ಓದಿನ ಬೆಳಕು ಬದುಕಿನ ಬೆಳಕಾಗಬೇಕು. ಅಕ್ಷರದ ಅರಿವು ಮೂಡಿದಾಗ ಸಮಾಜದಲ್ಲಿ ಬದಲಾವಣೆ ಬರಲು ಕಾರಣವಾಗುತ್ತದೆ. ಪುಸ್ತಕಗಳೇ ಇದಕ್ಕೆಲ್ಲ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಸ್ಥಳೀಯ ವಿಶ್ವೇಶ್ವರತೀರ್ಥ ನಗರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಏರ್ಪಡಿಸಿದ್ದ ಗ್ರಂಥಾಲಯ ಅನುಷ್ಠಾನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಗಳಿಸಿದ ಎರಡು ರುಪಾಯಿಗಳಲ್ಲಿ ಒಂದನ್ನು ಪುಸ್ತಕದ ಓದಿಗಾಗಿ ತೆಗೆದಿಡು ಎಂಬ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಆಶಯದಂತೆ ಇಂದು ನಗರದಲ್ಲಿ ಮೂರು ಗ್ರಂಥಾಲಯಗಳು ರಚನೆಗೊಳ್ಳುವುದು ಇದಕ್ಕೆ ಪೂರಕವಾಗಿದೆ ಎಂದರು.

ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ಮಾತನಾಡಿ, ಮೊಬೈಲ್ ಹಾವಳಿಯಿಂದ ಪುಸ್ತಕದ ಓದು ಕಡಿಮೆಯಾಗಿದೆ ಎಂಬ ಮಾತು ಸುಳ್ಳು. ಇಂದಿನ ತಲೆಮಾರಿನ ಓದಿನ ವಿಧಾನ ಬದಲಾಗಿದೆಂದು ಅರ್ಥೈಯಿಸಬೇಕು. ವ್ಯವಧಾನವಿಲ್ಲದ ಜೀವನದ ಓಟದಲ್ಲಿ ನಾವು ಹೊಸ ಹೊಸ ವಿಧಾನಗಳಿಗೆ ಜೋಡಿಸಿಕೊಳ್ಳಬೇಕು. ತಂತ್ರಜ್ಞಾನದ ಅರಿವು ಇದ್ದಾಗ ಮಾತ್ರ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಹಾಗಾದಾಗ ಮಾತ್ರ ನಾವು ಇಂದಿಗೆ ಬದುಕಿದಂತೆ ಎಂದರು.

ಇದೇ ವೇಳೆ ಅವರು ಗ್ರಂಥಾಲಯಕ್ಕೆ ಐವತ್ತಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ ಮಾತನಾಡಿ, ಇಡೀ ಕರ್ನಾಟಕದಲ್ಲಿ ಮಾರ್ಚ್‌ 2027 ಅಂತ್ಯಕ್ಕೆ ಸುಮಾರು ಒಂದು ಲಕ್ಷ ಗ್ರಂಥಾಲಯಗಳನ್ನು ಅನುಷ್ಠಾನಗೊಳಿಸುವುದು ಪ್ರಾಧಿಕಾರದ ಗುರಿಯಾಗಿದೆ. ಮನೆಗೊಂದು ಗ್ರಂಥಾಲಯ ಹುಟ್ಟುವುದು ಎಂದರೆ ಪ್ರತಿ ಮನೆಯಲ್ಲಿ ಅರಿವಿನ ದೀಪ ಹಚ್ಚಿದಂತೆ. ಇದರಿಂದಾಗಿ ಮೂರು ಕೋಟಿ ಮನಸ್ಸುಗಳಲ್ಲಿ ಓದಿನ ಅರಿವು ಮೂಡಿಸಿದಂತೆ ಎಂದರು.

ಕಾರ್ಯಕ್ರಮದಲ್ಲಿ ಡಾ. ವಿ.ಕೃ. ಗೋಕಾಕ ಟ್ರಸ್ಟಿನ ಅಧ್ಯಕ್ಷ ಡಾ. ಸತೀಶ ಕುಲಕರ್ಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಡಾ. ಅರವಿಂದ ಮೂಲಿಮನಿ, ದಾಕ್ಷಾಯಿಣಿ ಗಾಣಗೇರ, ಅಮೃತಕ್ಕ ಶೀಲವಂತರ, ರಾಜೇಶ್ವರಿ ಬಿಷ್ಟನಗೌಡರ, ಜಾಗೃತಿ ಸಮಿತಿಯ ಸದಸ್ಯರಾದ ಸಿ.ಎಸ್. ಮರಳಿಹಳ್ಳಿ, ಡಾ. ಲಕ್ಷ್ಮೀಕಾಂತ ಮಿರಜಕರ, ಸೋಮನಾಥ ಡಿ, ಸೋಮಣ್ಣ ಡಂಬರಮತ್ತೂರ, ಚಂದ್ರಪ್ಪ ಇತರರು ಇದ್ದರು.

ಸಮಿತಿಯ ಸದಸ್ಯ ಎಸ್.ಆರ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದೇಶ್ವರ ಹುಣಸಿಕಟ್ಟಿಮಠ ಕಾರ್ಯಕ್ರಮ ನಿರೂಪಿಸಿದರು. ಡಾ. ಗೀತಾ ಸುತ್ತಕೋಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮವೇ ಪ್ರಪಂಚಕ್ಕೆ ಆಧಾರ ನಮ್ಮದು ಮಾತ್ರ ಧರ್ಮ ಉಳಿದವು ಮತಗಳು: ವಿಧುಶೇಖರ ಶ್ರೀಗಳು
ಲ್ಯಾಂಡ್ ಜಿಹಾದ್: ಪ್ರಮೋದ್ ಮುತಾಲಿಕ್ ಆಕ್ರೋಶ