ಬುದ್ದ, ಬಸವ, ಅಂಬೇಡ್ಕರ ತತ್ವಗಳಿಂದ ಬದಲಾವಣೆ

KannadaprabhaNewsNetwork |  
Published : May 03, 2026, 02:45 AM IST
ಬೆಳಗಾವಿಯಲ್ಲಿ ಶ್ರೀ ಭಗವಾನ ಬುದ್ದ ಜಯಂತಿ ಆಚರಿಸಲಾಯಿತು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾನ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಉತ್ತರ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾನ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಉತ್ತರ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅಭಿಪ್ರಾಯಪಟ್ಟರು.

ನಗರದ ಸದಾಶಿವ ನಗರದ ಬುದ್ಧ ವಿಹಾರದಲ್ಲಿ ಭಗವಾನ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮನುಷ್ಯ ಸ್ವಾರ್ಥಕ್ಕೊಳಗಾಗುತ್ತಿದ್ದಾನೆ. ಸ್ವಾರ್ಥವನ್ನು ಬಿಟ್ಟು ಅಶಕ್ತರಿಗೆ ಸಹಾಯ ಮಾಡುವುದೇ ಬುದ್ಧರಿಗೆ ನಾವು ಸಲ್ಲಿಸುವ ನಿಜವಾದ ಗೌರವ. ಗೌತಮ ಬುದ್ಧರ ಉದಾತ್ತ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಶಾಂತಿಯುತ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಹಾಪುರುಷರ ಆಶಯಗಳು ಕೇವಲ ಭಾಷಣಕ್ಕೆ ಸೀಮಿತವಾಗದೆ, ನಮ್ಮ ದೈನಂದಿನ ಬದುಕಿನ ದಾರಿಯಾಗಬೇಕು. ಆಗ ಮಾತ್ರ ನಾವೆಲ್ಲರೂ ನಿಜವಾದ ಪರಿವರ್ತನೆಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ತಿಳಿಸಿದರು.

ಉಪ ಮೇಯರ್‌ ಹನುಮಂತ ಕೊಂಗಾಲಿ ಮಾತನಾಡಿ, ಭಗವಾನ್ ಬುದ್ಧರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನದಲ್ಲಿ ನೈಜ ಪರಿವರ್ತನೆ ತರಲು ಸಾಧ್ಯ ಎಂದು ತಿಳಿಸಿದರು.

ಬೆಳಗಾವಿಯ ರಾಣಿ ಪಾರ್ವತಿದೇವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಬಿ.ಕೋಲ್ಕಾರ ಮಾತನಾಡಿ, ಮುಕ್ತಿ ಎಂಬುದು ಮನುಕುಲದ ಆಸ್ತಿಯಾಗಿದ್ದು, ಏಕರೂಪದಲ್ಲಿದ್ದ ಮುಕ್ತಿಯ ಪರಿಕಲ್ಪನೆಯನ್ನು ಬಹುಮುಖಿ ಮುಕ್ತಿಯನ್ನಾಗಿ ಪರಿವರ್ತಿಸಿದ ಕೀರ್ತಿ ಭಗವಾನ್ ಬುದ್ಧನಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಜಗತ್ತಿನಾದ್ಯಂತ ಅತಿ ಹೆಚ್ಚು ಸಂಖ್ಯೆಯಲ್ಲಿ ಬುದ್ಧನ ಪ್ರತಿಮೆಗಳಿರುವುದೇ ಆತನ ವಿಶ್ವವ್ಯಾಪಿ ಪ್ರಭಾವಕ್ಕೆ ಸಾಕ್ಷಿಯಾಗಿದೆ. ಬುದ್ಧನು ಕೇವಲ ಒಬ್ಬ ವ್ಯಕ್ತಿಯಲ್ಲ, ಆತ ಜಗತ್ತಿನ ಮಹಾಗುರು. ಇಂದು ವಿಶ್ವದ ಸುಮಾರು 195 ರಾಷ್ಟ್ರಗಳು ಬುದ್ಧನ ಶಾಂತಿ ಮತ್ತು ಅಹಿಂಸೆಯ ತತ್ವಗಳನ್ನು ಅನುಸರಿಸುತ್ತಿವೆ. ಮನುಷ್ಯ ಕುಲದ ಮೇಲಿನ ಅಪಾರ ಪ್ರೀತಿ ಮತ್ತು ಕರುಣೆಯಿಂದಾಗಿಯೇ ಬುದ್ಧನು ತನ್ನೆಲ್ಲಾ ಸುಖ-ಭೋಗಗಳನ್ನು ತ್ಯಜಿಸಿ ಮಹಾಪರಿತ್ಯಾಗಿಯಾದರು ಎಂದು ವಿವರಿಸಿದರು.

ನಗರ ಸೇವಕ ಸಂದೀಪ ಜೀರಗ್ಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬೆಳಗಾವಿ ತಾಲೂಕ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜ ಚನ್ನಣ್ಣವರ್, ಬೆಳಗಾವಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ್, ಸಮಾಜದ ಮುಖಂಡರಾದ ಮಲ್ಲೇಶ್ ಚೌಗಲೆ, ಶಾಂತಪ್ಪ ಹಾದಿಮನಿ, ದುರ್ಗೇಶ್ ಮೇತ್ರಿ, ಭಾರತೀಯ ಬೌದ್ಧ ಮಹಾಸಭಾ ಬೆಳಗಾವಿ ಅಧ್ಯಕ್ಷ ಯಮನಪ್ಪ ಗಡಿನಾಯಕ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೊ.ಮಹಾಂತೇಶ್ ಚಲವಾದಿ, ಮಾರ್ಕೆಟ್ ಠಾಣೆಯ ಸಿಪಿಐ ಜೆ.ಎಂ.ಕಾಲಿಮಿರ್ಚಿ, ಭಾರತೀಯ ಬೌದ್ಧ ಮಹಾಸಭಾ ಸಮತಾ ಸೈನಿಕ ದಳದ ಮೇಜರ್ ಜನರಲ್ ಯಶ್ವಂತ್ ಸಾಮ್ರಾಟ್ ಸೇರಿದಂತೆ‌ ಸಮಾಜದ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ