ಚನ್ನಗಿರಿ ತಾಲೂಕು ಸರ್ಕಾರಿ ಪ.ಪೂ. ಕಾಲೇಜುಗಳ ಫಲಿತಾಂಶ

KannadaprabhaNewsNetwork | Published : Apr 10, 2025 1:02 AM

ಸಾರಾಂಶ

ತಾಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಫಲಿತಾಂಶಗಳು ಮಂಗಳವಾರ ಪ್ರಕಟಗೊಂಡಿದ್ದು ಫಲಿತಾಂಶದ ವಿವರ ಇಂತಿವೆ.

- ಸಂತೆಬೆನ್ನೂರು-ಶೇ.37, ತ್ಯಾವಣಿಗೆ-ಶೇ.54, ಚನ್ನಗಿರಿ-ಶೇ.50.61, ನಲ್ಲೂರು-ಶೇ.36 ಸಾಧನೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ತಾಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಫಲಿತಾಂಶಗಳು ಮಂಗಳವಾರ ಪ್ರಕಟಗೊಂಡಿದ್ದು ಫಲಿತಾಂಶದ ವಿವರ ಇಂತಿವೆ. ಚನ್ನಗಿರಿ ಪಟ್ಟಣದ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಿದ್ದು, ಈ ಮೂರು ವಿಭಾಗಗಳಿಂದ 247 ವಿದ್ಯಾರ್ಥಿಗಳು ಪರೀಕ್ಷೆ ಬೆರೆದಿದ್ದರು. ಇವರಲ್ಲಿ 125 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.50.61ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ್ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ 124 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 64 ವಿದ್ಯಾರ್ಥಿಗಳು ಉತ್ತೀರ್ಣ. ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 92ರಲ್ಲಿ 45 ಜನ ಪಾಸಾಗಿದ್ದಾರೆ ಎಂದಿದ್ದಾರೆ.

ಇದೇ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಆರ್.ನಂದಿನಿ ಅವರು 520 ಅಂಕಗಳನ್ನು ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ ಎಸ್.ಸೃಜನ 499, ವಿಜ್ಞಾನ ವಿಭಾಗದಲ್ಲಿ ಎಚ್.ಕೆ. ಅನು 491 ಅಂಕಗಳನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಸಂತೆಬೆನ್ನೂರು:

ಸಂತೆಬೆನ್ನೂರಿನ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಮೂರು ವಿಭಾಗಗಳಿಂದ 227 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 82 ಜನ ಪಾಸಾಗಿ ಶೇ.37 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ರಂಗಪ್ಪ ತಿಳಿಸಿದ್ದಾರೆ.

ಕಲಾವಿಭಾಗದಲ್ಲಿ 115 ಜನ ಪರೀಕ್ಷೆ ಬರೆದಿದ್ದು, 45 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 50ರಲ್ಲಿ 26 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ತ್ಯಾವಣಿಗೆ:

ತ್ಯಾವಣಿಗೆ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಮೂರು ವಿಭಾಗಗಳಿಂದ 80 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 43 ವಿದ್ಯಾರ್ಥಿಗಳು ಪಾಸಾಗಿ, ಶೇ.54ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ 38 ಜನ ಪರೀಕ್ಷೆ ಬರೆದಿದ್ದು, ಇವರಲ್ಲಿ 18 ಜನ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 23 ಜನ ಪರೀಕ್ಷೆ ಬರೆದಿದ್ದು, ಇವರಲ್ಲಿ 11 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 19 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 14 ಜನ ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.

ನಲ್ಲೂರು:

ನಲ್ಲೂರು ಗ್ರಾಮದ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಮೂರು ವಿಭಾಗಗಳಿಂದ 78 ಜನ ಪರೀಕ್ಷೆ ಬರೆದಿದ್ದು, ಇವರಲ್ಲಿ 31 ವಿದ್ಯಾರ್ಥಿಗಳು ಪಾಸಾಗಿ ಶೇ.36 ಫಲಿತಾಂಶ ದೊರೆತಿದೆ ಎಂದು ಪ್ರಾಚಾರ್ಯ ನಾಗರಾಜಪ್ಪ ತಿಳಿಸಿದ್ದಾರೆ.

- - -

Share this article