ಚನ್ನಮ್ಮ ೨೦೦ನೇ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

KannadaprabhaNewsNetwork | Published : Oct 17, 2024 12:45 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅ.೨೩ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ೨೦೦ನೇ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆ.೨೩ರಂದು ಬೆಳಗ್ಗೆ ೯.೩೦ಕ್ಕೆ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾಡಳಿತದ ವತಿಯಿಂದ ಅ.೨೩ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ೨೦೦ನೇ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆ.೨೩ರಂದು ಬೆಳಗ್ಗೆ ೯.೩೦ಕ್ಕೆ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರವರೆಗೆ ನಡೆಯಲಿದೆ. ಬೆಳಗ್ಗೆ ೧೦.೩೦ಕ್ಕೆ ರಂಗಮಂದಿರದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸುಗಮಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು. ಅಂದು ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿಜಯಪುರ ಗ್ರೇಡ್-೨ ತಹಸೀಲ್ದಾರ್‌ ಐ.ಎಚ್.ತುಂಬಗಿ, ಜಿ.ಎಂ.ಕೋಲುರ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ಸಂಜುಗೌಡ ಪಾಟೀಲ, ಮಲ್ಲಿಕಾರ್ಜುನ ಬೃಂಗಿಮಠ, ನಿಂಗನಗೌಡ ಪಾಟೀಲ, ನಿಂಗಪ್ಪ ಸಂಗಾಪುರ, ಬಸವರಾಜ ಬಾಗೇವಾಡಿ, ಮಹಾದೇವಿ ಗೋಕಾಕ, ಲಲಿತಾ ಬಿರಾದಾರ, ಬಸಮ್ಮ ಗುಜರಿ, ಜ್ಯೋತಿ ಪಾಗದ, ಶರಣಬಸು ಗಂಗಶೆಟ್ಟಿ, ಸಂತೋಷ ಮುಂಜಣ್ಣಿ, ಈರಣ್ಣ ಡೆಂಗಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಫಯಾಜ ಕಲಾದಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share this article