ಕೆರೆಗೋಡು ಪ್ರಕರಣ ಖಂಡಿಸಿ ಉಡುಪಿಯಲ್ಲಿ ಹನುಮಾನ್ ಚಾಲೀಸ ಪಠಣ

KannadaprabhaNewsNetwork |  
Published : Feb 10, 2024, 01:45 AM IST
ಎಡಿಸಿ ಮನವಿ | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣ ಮತ್ತೇ ಹನುಮಾನ್ ಧ್ವಜ ಹಾರಾಟಕ್ಕೆ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದಲ್ಲಿ ರಾಜ್ಯಾದ್ಯಂತದಿಂದ ವಿಹಿಂಪ - ಬಜಜರಂಗದಳದ ಲಕ್ಷಾಂತರ ಕಾರ್ಯಕರ್ತರು ಮಂಡ್ಯ ಚಲೋ ನಡೆಸಲಾಗುತ್ತದೆ ಎಂದು ಬಜರಂಗದಳ ಕರ್ನಾಟಕ ದಕ್ಷಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದ ಹಾರಿಸಲಾಗಿದ್ದ ಹನುಮಾನ್‌ ಧ್ವಜವನ್ನು ರಾಜ್ಯ ಸರ್ಕಾರ ಇಳಿಸಿದ ಪ್ರಕರಣದ ವಿರುದ್ಧ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹನುಮಾನ್ ಚಾಲೀಸ್ ಪಠಣ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಬಜರಂಗದಳ ಕರ್ನಾಟಕ ದಕ್ಷಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್., ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣ ಮತ್ತೇ ಹನುಮಾನ್ ಧ್ವಜ ಹಾರಾಟಕ್ಕೆ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದಲ್ಲಿ ರಾಜ್ಯಾದ್ಯಂತದಿಂದ ವಿಹಿಂಪ - ಬಜಜರಂಗದಳದ ಲಕ್ಷಾಂತರ ಕಾರ್ಯಕರ್ತರು ಮಂಡ್ಯ ಚಲೋ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರಗಳು ಸ್ವಾತಂತ್ರ್ಯ ಸಿಕ್ಕಿದಂದಿನಿಂದ ಹಿಂದೂ ತುಷ್ಟೀಕರಣಕ್ಕೆ, ಅಲ್ಪಸಂಖ್ಯಾತರ ಓಲೈಕೆಗೆ ಕೇಸರಿ ಧ್ವಜದ ವಿರುದ್ಧ ನಾನಾ ಕಾರ್ಯಗಳನ್ನು ನಡೆಸಿದೆ. ಆದರೇ ಇಂದು ಹಿಂದೂ ಸಮಾಜ ಜಾಗೃತಗೊಂಡಿದೆ. ಆದ್ದರಿಂದ ಕೆರೆಗೋಡು ಘಟನೆಯ ವಿರುದ್ದ ರಾಜ್ಯಾದ್ಯಂತ ಅಭಿಯಾನ ಆರಂಭವಾಗಿದೆ. ಮುಂದೆ ಪ್ರತಿ ಹಿಂದೂ ಮನೆಯ ಮೇಲೆ ಕೇಸಿ ಧ್ವಜ ಹಾರಾಡಲಿದೆ ಎಂದರು.

ಇನ್ನಾದರೂ ಕಾಂಗ್ರೆಸ್ ಸರ್ಕಾರ ಹಿಂದು ಭಾವನೆಗಳಿಗೆ ಬೆಲೆ ನೀಡಬೇಕು, ಇಲ್ಲದಿದ್ದಲ್ಲಿ ಹಿಂದುಗಳು ತನ್ನ ಸ್ವಾಭಿಮಾನವನ್ನು ತೋರಿಸಬೇಕಾಗುತ್ತದೆ ಎಂದರು.

ನಂತರ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ವಿಹಿಪಂ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಮುಂತಾದವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!