- ಸರ್ಕಾರಿ ಎಲ್ಲ ಸವಲತ್ತು ಬಡವರ ವಿದ್ಯಾರ್ಥಿಗಳಿಗೆ ತಪ್ಪದೇ ತಲುಪಿಸಬೇಕು: ಶಾಸಕ ಬಸವರಾಜ ವಿ. ಶಿವಗಂಗಾ ಸೂಚನೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು ವಿದ್ಯಾರ್ಥಿಗಳಿಗೆ ಆಹಾರ ತಯಾರು ಮಾಡುವ ಅಡುಗೆ ಮನೆ, ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ಘಟಕ, ಬೋಧನಾ ಕೊಠಡಿಗಳು ಸೇರಿದಂತೆ ವಸತಿ ಶಾಲೆ ಸುತ್ತಮುತ್ತಲೂ ಪರಿಸದ ಪರಿಸ್ಥಿತಿ ಪರಿಶೀಲಿಸಿದರು. ಈ ವೇಳೆ ಅವ್ಯವಸ್ಥೆ ಕಣ್ಣಾರೆ ಕಂಡು ಸ್ವಚ್ಛತೆ ಕಾಪಾಡಲು ಹೆಚ್ಚು ಆದ್ಯತೆ ನೀಡಬೇಕು ಎಂದು ಶಾಲಾ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರ ಬಡಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ಶಾಲೆಗಳನ್ನು ತೆರೆದಿದೆ. ವಿದ್ಯಾರ್ಥಿಗಳಿಗೆ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಎಲ್ಲ ಸಿಬ್ಬಂದಿ ಮೇಲಿದೆ. ಇತ್ತೀಚೆಗೆ ಡೆಂಘೀಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಮಕ್ಕಳಿಗೆ ಆರೋಗ್ಯದಲ್ಲಿ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಶಾಲೆಗೆ ಗೈರಾಗದೇ ಎಲ್ಲ ಸಿಬ್ಬಂದಿ ಸಮರ್ಪಕವಾಗಿ ಕೆಲಸ ಮಾಡಬೇಕು. ಸಮಯಕ್ಕೆ ತಕ್ಕಂತೆ ತರಗತಿಗಳು ನಡೆಯಬೇಕು ಎಂದು ತಾಕೀತು ಮಾಡಿದರು.ಮಕ್ಕಳಿಗೆ ನೀಡುವ ಆಹಾರದಲ್ಲಿ ಯಾವುದೇ ರೀತಿಯ ಲೋಪಗಳಾಗಬಾರದು. ಸರ್ಕಾರ ನೀಡುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು. ಪುಷ್ಠಿದಾಯಕ ಆಹಾರ ತಯಾರಿಸಿ, ನೀಡಬೇಕು. ಗುಣಮಟ್ಟದ ತರಕಾರಿಗಳನ್ನು ಪ್ರತಿದಿನ ಖರೀದಿ, ಬಳಸಬೇಕು. ಶೇಖರಣೆ ಮಾಡಿದ ಆಹಾರ ಪದಾರ್ಥಗಳನ್ನು ವಿದ್ಯಾರ್ಥಿಗಳಿಗೆ ನೀಡಿರುವುದು ತಿಳಿದುಬಂದರೆ ಪರಿಣಾಮ ನೆಟ್ಟಗಿರದು ಎಂದು ಪ್ರಾಚಾರ್ಯರು, ಸಿಬ್ಬಂದಿಗೆ ಎಚ್ಚರಿಸಿದರು.
- - -
- ಬಸವರಾಜ ವಿ. ಶಿವಗಂಗಾ, ಶಾಸಕ, ಚನ್ನಗಿರಿ ಕ್ಷೇತ್ರ
ಚನ್ನಗಿರಿ ತಾಲೂಕಿನ ಕೆರೆಬಿಳಚಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಬಸವರಾಜು ವಿ. ಶಿವಗಂಗಾ ದಿಢೀರ್ ಭೇಟಿ ನೀಡಿ ಅವ್ಯವಸ್ಥೆಗಳ ಪರಿಶೀಲನೆ ನಡೆಸಿದರು.