ಕನ್ನಡಪ್ರಭ ವಾರ್ತೆ ಮಂಗಳೂರು
ಈ ಸಂದರ್ಭ ಮಾತನಾಡಿದ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ರಜತ ಸಂಭ್ರಮ ಅತ್ಯಂತ ಶಿಸ್ತುಬದ್ಧವಾಗಿ, ಯಶಸ್ವಿಯಾಗಿ ನಡೆಯಲಿದ್ದು, ಸರ್ವ ಸಿದ್ಧತೆ ನಡೆಸಲಾಗಿದೆ. ಸುಮಾರು 1.50 ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪಿನ ಸದಸ್ಯರು ಸಮವಸ್ತ್ರಧಾರಿಗಳಾಗಿ ಈ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ದಾಖಲೆ ನಿರ್ಮಾಣ ಮಾಡಲಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಮಾತನಾಡಿ, ರಜತ ಸಂಭ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವೂ ಅಗತ್ಯ ಎಂದರು.ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಮಾತನಾಡಿ, ಕಾರ್ಯಕ್ರಮಕ್ಕಾಗಿ ಮೂರು ಪ್ರಮುಖ ವೇದಿಕೆಗಳು ನಿರ್ಮಾಣವಾಗಲಿವೆ. ಲಕ್ಷಾಂತರ ಮಂದಿ ಕುಳಿತುಕೊಳ್ಳುವ ಚಪ್ಪರ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಆಹ್ವಾನಿಸುವ ಬಗ್ಗೆಯೂ ಅಧ್ಯಕ್ಷರು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಜೈರಾಜ್ ಬಿ. ರೈ, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಗೋಲ್ಡ್ ಫಿಂಚ್ ಸಂಸ್ಥೆಯ ವ್ಯವಸ್ಥಾಪಕ ಬಾಲಕೃಷ್ಣ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ತುಂಬೆ, ದಿವಾಕರ್, ನವೋದಯ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಲೋಕೇಶ್ ಮತ್ತಿತರರು ಇದ್ದರು.