ಎತ್ತಿನ ಭುಜಕ್ಕೆ ಚಾರಣ ಬಂದ್

KannadaprabhaNewsNetwork | Published : Jul 2, 2025 12:21 AM
ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನ ಭುಜ. | Kannada Prabha

ಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವದಿಂದಲೂ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಧಾರಾಕಾರ ಮಳೆ ಯಿಂದಾಗಿ ಮಲೆನಾಡು ಅಕ್ಷರಶಃ ಮಳೆ ನಾಡಾಗಿ ಪರಿವರ್ತನೆಯಾಗಿದೆ. ಹೀಗಾಗಿ ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿರುವ ಚಿಕ್ಕಮಗಳೂರಿನ ಒಂದೊಂದೇ ಪ್ರಮುಖ ಪ್ರವಾಸಿ ತಾಣಗಳಿಗೆ ಮಳೆಗಾಲದ ಅವಧಿಯಲ್ಲಿ ನಿರ್ಬಂಧ ಬೀಳುವ ಸಾಧ್ಯತೆ ದಟ್ಟವಾಗಿದೆ. ಇದರ ಮೊದಲ ಭಾಗವಾಗಿ ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮೂಡಿಗೆರೆ ತಾಲೂಕಿನ ಎತ್ತಿನ ಭುಜಕ್ಕೆ ಒಂದು ತಿಂಗಳ ಕಾಲ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

- ಮುಂದಿನ ಒಂದು ತಿಂಗಳ ಕಾಲ ಟ್ರಕ್ಕಿಂಗ್‌ಗೆ ಇಲ್ಲ ಅವಕಾಶ, ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವದಿಂದಲೂ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಧಾರಾಕಾರ ಮಳೆ ಯಿಂದಾಗಿ ಮಲೆನಾಡು ಅಕ್ಷರಶಃ ಮಳೆ ನಾಡಾಗಿ ಪರಿವರ್ತನೆಯಾಗಿದೆ. ಹೀಗಾಗಿ ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿರುವ ಚಿಕ್ಕಮಗಳೂರಿನ ಒಂದೊಂದೇ ಪ್ರಮುಖ ಪ್ರವಾಸಿ ತಾಣಗಳಿಗೆ ಮಳೆಗಾಲದ ಅವಧಿಯಲ್ಲಿ ನಿರ್ಬಂಧ ಬೀಳುವ ಸಾಧ್ಯತೆ ದಟ್ಟವಾಗಿದೆ. ಇದರ ಮೊದಲ ಭಾಗವಾಗಿ ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮೂಡಿಗೆರೆ ತಾಲೂಕಿನ ಎತ್ತಿನ ಭುಜಕ್ಕೆ ಒಂದು ತಿಂಗಳ ಕಾಲ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

ಜುಲೈ 1 ರಿಂದ ಜುಲೈ 31 ರವರೆಗೆ ಎತ್ತಿನಭುಜಕ್ಕೆ ಪ್ರವಾಸಿಗರು ಭೇಟಿ ನೀಡುವುದನ್ನು ನಿರ್ಬಂಧಿಸಿ ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸರಂಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಪ್ರವಾಸಿಗರು ಅನುಮತಿ ಪಡೆದು ಅಥವಾ ಅನುಮತಿ ಪಡೆಯದೆ ಆಗಮಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಈ ಬಾರಿ ಮುಂಗಾರು ಪೂರ್ವದಲ್ಲಿಯೇ ಧಾರಾಕಾರ ಮಳೆ ಸುರಿದಿತ್ತು. ಮುಂಗಾರು ಆರಂಭ ದಲ್ಲಿಯೇ ಮಳೆರಾಯ ಅಬ್ಬರಿಸಿದ್ದರಿಂದಾಗಿ ಮಲೆನಾಡಿನಾದ್ಯಂತ ಅವಘಡಗಳು ಸಂಭವಿಸಲಾರಂಭಿಸಿವೆ. ಇದರ ನಡುವೆ ಗುಡ್ಡ ಕುಸಿತವೂ ಹೆಚ್ಚುತ್ತಿರುವ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಎತ್ತಿನಭುಜಕ್ಕೆ ನಿರ್ಬಂಧ ಹೇರಲಾಗಿದೆ.

ಮೂಡಿಗೆರೆ ವಲಯದ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಭೂಕುಸಿತ ಉಂಟಾಗುವ ಸಾಧ್ಯತೆಯೂ ಇದೆ. ಎತ್ತಿನ ಭುಜ ಚಾರಣ ಪ್ರದೇಶದಲ್ಲಿ ಹೆಚ್ಚಿನ ಮಂಜು ಕವಿದ ವಾತಾವರಣ ಇರುವುದರಿಂದ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಪ್ರವಾಸಿಗರ ಸುರಕ್ಷತೆ ಹಿತದೃಷ್ಟಿಯಿಂದ ಒಂದು ತಿಂಗಳ ಕಾಲ ಎತ್ತಿನ ಭುಜ ಚಾರಣ ವನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಿಎಫ್ ಒ ಆದೇಶದಲ್ಲಿ ತಿಳಿಸಿದ್ದಾರೆ.--- ಬಾಕ್ಸ್‌ ----ನಿಷೇಧಕ್ಕೆ ಕಾರಣಗಳುಎತ್ತಿನ ಭುಜಕ್ಕೆ 7 ಕಿ.ಮೀ. ಚಾರಣ ಹೋಗಿ ಅಲ್ಲಿನ ಸೌಂದರ್ಯ ಸವಿಯಬೇಕು. ಇಲ್ಲಿಗೆ ಯಾವುದೇ ವಾಹನಗಳು ಹೋಗುವುದಿಲ್ಲ. ಒಂದು ವೇಳೆ ಚಾರಣಕ್ಕೆ ತೆರಳಿದಾಗ ಯಾವುದೇ ರೀತಿಯ ಸಮಸ್ಯೆಯಾದರೂ ಪ್ರವಾಸಿಗರನ್ನು ಅಲ್ಲಿನಿಂದ ಹೊತ್ತುಕೊಂಡೆ ವಾಪಸ್ ಕರೆ ತರಬೇಕಿದೆ. ಹೀಗಾಗಿ ಪ್ರವಾಸಿಗರ ರಕ್ಷಣೆ ಮಾಡುವುದು ಕಷ್ಟ ಸಾಧ್ಯ.

ಇನ್ನು ಎತ್ತಿನಭುಜ ದಟ್ಟಾರಣ್ಯದಿಂದ ಕೂಡಿರುವ ಪ್ರದೇಶ. ಇಲ್ಲಿ ಕಾಡುಪ್ರಾಣಿಗಳ ಕಾಟ ಅತಿ ಹೆಚ್ಚಾಗಿದೆ. ಮಳೆಯೂ ಬಾರಿ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ಜಾರುವ ಪ್ರದೇಶವೂ ಹೆಚ್ಚಾಗಿದೆ. ಹೀಗಾಗಿ ಎತ್ತಿನ ಭುಜದಲ್ಲಿ ಚಾರಣಕ್ಕೆ ಬ್ರೇಕ್ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಇದೀಗ ಅರಣ್ಯ ಇಲಾಖೆ ಒಂದು ತಿಂಗಳ ಕಾಲ ಚಾರಣವನ್ನು ನಿರ್ಬಂಧಿಸಿದೆ.

- 1 ಕೆಸಿಕೆಎಂ 3ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನ ಭುಜ.