ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಬಾಲಕಿಯೊಬ್ಬಳು ಪ್ರೀತಿಯ ಹೆಸರಿನಲ್ಲಿ ವಂಚನೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಬಾಲಕಿ ಹಾಗೂ ಆರೋಪಿ ರಮೇಶ ಗಚ್ಚಿನಮನಿ ಕಳೆದ ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಇತ್ತೀಚೆಗೆ ಮತ್ತೋರ್ವ ಬಾಲಕಿಯೊಂದಿಗೆ ರಮೇಶ ಅತ್ಯಂತ ಆತ್ಮೀಯವಾಗಿರುವ ಕೆಲವು ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಈಕೆಯ ಗಮನಕ್ಕೆ ಬಂದಿದ್ದವು. ಇದರಿಂದಾಗಿ ಬಾಲಕಿ ತೀವ್ರ ಮಾನಸಿಕ ನೊಂದಿದ್ದಳು ಎಂದು ಹೇಳಲಾಗುತ್ತಿದೆ.
ಸೋಮವಾರ ಸಂಜೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಅಂದಾಜು 35- 45 ವರ್ಷದ ಪುರುಷನ ಮೃತದೇಹವನ್ನು ಸ್ಥಳೀಯರು ಗಮನಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತದೇಹ ಗುರುತಿಸಲಾಗದಂಥ ಸ್ಥಿತಿಯಲ್ಲಿ ಕಂಡುಬಂದಿದ್ದು, ದೇಹದ ಮೇಲೆ ಯಾವುದೇ ಹೆಸರು ವಿಳಾಸ ವಾರಸುದಾರರ ಗುರುತಿನ ದಾಖಲೆಗಳು ಲಭ್ಯವಾಗಿಲ್ಲ.