ಶಾಲೆ ಹಾಸ್ಟೆಲ್‌ನಲ್ಲಿ ಆಹಾರದ ಗುಣಮಟ್ಟ ಪರಿಶೀಲಿಸಿ: ಸುಷ್ಮಾ ಗೋಡಬೋಲೆ

KannadaprabhaNewsNetwork |  
Published : Nov 13, 2026, 02:15 AM IST
 | Kannada Prabha

ಸಾರಾಂಶ

ಶಾಲೆಗಳಲ್ಲಿ ಬಿಸಿಯೂಟ ಸಿದ್ದಪಡಿಸುವ ಕೊಠಡಿಗಳಲ್ಲಿ ವಸ್ತುಗಳನ್ನು ದಾಸ್ತಾನು ಮಾಡಲು ಸ್ಟೋರ್‌ ರೂಂ ಸೌಲಭ್ಯ ಇರುವ ರೀತಿಯಲ್ಲಿ ಮತ್ತು ಇತರೆ ಎಲ್ಲಾ ಅಗತ್ಯ ಸೌಲಭ್ಯಗಳು ಹಾಗೂ ಸೂಕ್ತ ಭದ್ರತೆ ಇರುವಂತೆ ನಿರ್ಮಿಸಬೇಕು

ಕಾರವಾರ: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿನ ಬಿಸಿಯೂಟ ವಿತರಣೆ ಮತ್ತು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟ ಮತ್ತು ಪೌಷ್ಟಿಕಾಂಶಗಳಿಂದ ಕೂಡಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್ ನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವರ್ಚುಚಲ್ ಮೂಲಕ ಮಾತನಾಡಿದರು.

ಶಾಲೆಗಳಲ್ಲಿ ಬಿಸಿಯೂಟ ಸಿದ್ದಪಡಿಸುವ ಕೊಠಡಿಗಳಲ್ಲಿ ವಸ್ತುಗಳನ್ನು ದಾಸ್ತಾನು ಮಾಡಲು ಸ್ಟೋರ್‌ ರೂಂ ಸೌಲಭ್ಯ ಇರುವ ರೀತಿಯಲ್ಲಿ ಮತ್ತು ಇತರೆ ಎಲ್ಲಾ ಅಗತ್ಯ ಸೌಲಭ್ಯಗಳು ಹಾಗೂ ಸೂಕ್ತ ಭದ್ರತೆ ಇರುವಂತೆ ನಿರ್ಮಿಸಬೇಕು. ಆಹಾರ ಸಿದ್ದಪಡಿಸುವವರಿಗೆ ಮತ್ತು ಸಹಾಯಕರಿಗೆ ನಿಗದಿತವಾಗಿ ವೇತನ ನೀಡಬೇಕು, ಇದರಲ್ಲಿ ವಿಳಂಬ ಮಾಡಬಾರದು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, 15ನೇ ಹಣಕಾಸು ಯೋಜನೆಯಡಿ ಹೊಸದಾಗಿ ಮಂಜೂರಾಗಿರುವ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗಳಿಸುವುವಂತೆ ಮತ್ತು ಶಿರಸಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಎಸ್‌ಆರ್ ಅಡಿ ಮಕ್ಕಳಿಗಾಗಿ ಸ್ಥಾಪಿಸಲು ಉದ್ದೇಶಿಸಿರುವ ಆರಂಭಿಕ ಹಸ್ತಕ್ಷೇಪ ಕೇಂದ್ರವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್, ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳ ಮೊತ್ತ ಪಾವತಿ ಬಗ್ಗೆ ಈಗಾಗಲೇ ಬಿಲ್ ಸಿದ್ದಪಡಿಸಲಾಗಿದ್ದು, 2 ವಾರದೊಳಗೆ ಈ ಮೊತ್ತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ದಿ ಬಗ್ಗೆ ವಿಶೇಷ ಕಾರ್ಯಕ್ರಮ ರೂಪಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೆಕು, ಕ್ರಿಯಾ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದ ಅವರು ಇತ್ತೀಚಿಗೆ ಶಿರಸಿಯಲ್ಲಿ ಬಾವಿಗಳಲ್ಲಿ ತೈಲ ಮಿಶ್ರಿತ ನೀರು ಕಂಡುಬಂದಿರುವ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ, ಕಾರಣ ಪತ್ತೆ ಹಚ್ಚಿ ಸಮಸ್ಯೆಗೆ ಪರಿಹರ ಒದಗಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ. ಸಿಇಓ ಡಾ. ದಿಲೀಷ್ ಶಶಿ, ಉಪ ಕಾರ್ಯದರ್ಶಿಗಳಾದ ಅಲ್ಲಾಬಕಷ್, ಪ್ರಕಾಶ್ ಹಾಲಮ್ಮನವರ್, ಮುಖ್ಯ ಲೆಕ್ಕಾಧಿಕಾರಿ ಆನಂದ್ ಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌