ಕನ್ನಡಪ್ರಭವಾರ್ತೆ ಕುಶಾಲನಗರ
ಹೆಬ್ಬಾಲೆ ವ್ಯಾಪ್ತಿಯಲ್ಲಿ ಸೆಸ್ಕಾಂ ಉಪವಿಭಾಗ ಕಚೇರಿ ತೆರೆಯಲು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸಭೆಯಲ್ಲಿ ಪ್ರಸ್ತಾವನೆ ಬಗ್ಗೆ ಅಧಿಕಾರಿಗಳ ಸಲಹೆ ಪಡೆದರು.
ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕು. ಕಟ್ಟಗಳ ಮೇಲ್ಗಡೆ ಹಾದುಹೋಗಿರುವ ವಿದ್ಯುತ್ ಲೈನ್ ಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಂಟಿಕೊಪ್ಪ ಪಟ್ಟಣದಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸದಸ್ಯ ರಫೀಕ್ ಖಾನ್ ಅಧಿಕಾರಿಗಳ ಗಮನಕ್ಕೆ ತಂದರು.ದುರ್ಘಟನೆ ಕುರಿತು ಚರ್ಚೆ: ಕುಶಾಲನಗರ ಸಮೀಪ ಗುಮ್ಮನ ಕೊಲ್ಲಿ ಬಳಿ ಇತ್ತೀಚೆಗೆ 11 ಕೆ ವಿ ಎ ವಿದ್ಯುತ್ ಲೈನ್ ತಗಲಿ ಬಾಲಕಿ ಸುಟ್ಟು ಅಸ್ವಸ್ಥಳಾಗಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಈ ರೀತಿಯ ಘಟನೆ ನಡೆದಿದೆ ಎಂದು ಅಧ್ಯಕ್ಷ ವಿ ಪಿ ಶಶಿಧರ್, ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯರಾದ ಬಿ ಡಿ ಅಣ್ಣಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಿಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ತಂತಿ ಸ್ಥಳಾಂತರಿಸಲು ತಿಳಿಸಿದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದು ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸುಂಟಿಕೊಪ್ಪದಿಂದ ಕುಶಾಲನಗರ ಪ್ರಯಾಣಿಕರಿಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸುವುದು ಹಾಗೂ ಶಿರಂಗಾಲದಿಂದ ಕುಶಾಲನಗರಕ್ಕೆ ಹೆಚ್ಚಿನ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಪರಮೇಶ್ವರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ ಸಿ ಶಶಿ ಭೀಮಯ್ಯ, ಮುಸ್ತಫ ತಾಲೂಕು ಸಮಿತಿ ಸದಸ್ಯರಾದ ಕೆ ಎಸ್ ಕೃಷ್ಣೇಗೌಡ, ಎಸ್ಎಸ್ ವಿವೇಕಾನಂದ, ಶ್ರೀನಿವಾಸ್ ಕುಮಾರ್ ಯು ಎಂ ಕಿಶೋರ್ ಫಿಲೋಮಿನಾ, ಎಸ್ ಎ ಶ್ರೀನಿವಾಸ್ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.