ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ- ಡಿಸಿ

KannadaprabhaNewsNetwork |  
Published : Oct 30, 2026, 02:30 AM IST
ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯಲ್ಲಿ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಸಂಬಂಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಯಿತು. | Kannada Prabha

ಸಾರಾಂಶ

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಹಾವೇರಿ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಸಂಬಂಧ, ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರು ಸಂಬಂಧಿಸಿದ ಮತಗಟ್ಟೆ, ತಹಸೀಲ್ದಾರ್ ಕಚೇರಿ, ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

6,875 ಯುವ ಮತದಾರರ ಹೆಚ್ಚಳ: 2026 ಆ.24ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 5,396 ಪುರುಷ, 4,562 ಮಹಿಳಾ ಮತದಾರರು ಸೇರಿ 9,961 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 6,875 ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ಎಲ್ಲರ ಸಹಕಾರದಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅತ್ಯಂತ ಯಶಸ್ವಿಯಾಗಿ ಜರುಗಿದೆ ಎಂದರು.

ಸೇರ್ಪಡೆ ಕಾರ್ಯ ನಿರಂತರ: ಮತದಾರರ ಪಟ್ಟಿಯಲ್ಲಿ ಒಂದು ವೇಳೆ ಹೆಸರು ಬಿಟ್ಟು ಹೋಗಿದ್ದರೆ ಗೊಂದಲಕ್ಕೆ ಒಳಗಾಗಬಾರದು. ನಮೂನೆ-6 ಭರ್ತಿಮಾಡಿ ಸಲ್ಲಿಸಬಹುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ನಿರಂತವಾಗಿ ನಡೆಯುತ್ತದೆ. ಅಲ್ಲದೆ ಜಿಲ್ಲೆಯಲ್ಲಿ 77 ಮತಗಟ್ಟೆಗಳನ್ನು ಹೆಚ್ಚಳ ಮಾಡಿದ್ದರಿಂದ ತಮ್ಮ ಹೆಸರು ಅಕ್ಕಪಕ್ಕದ ಮತಗಟ್ಟೆಯಲ್ಲಿ ಬಂದಿರಬಹುದು. ಹಾಗಾಗಿ ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ನೇಮಕ:ಹಾವೇರಿ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾಗಿ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಐಎಎಸ್ ಅಧಿಕಾರಿ ಡಾ.ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸಭಾ ಕ್ಷೇತ್ರ `ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ ಜಾಲತಾಣ ಮತ್ತು ಜಿಲ್ಲೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದು ಎಂದರು.

ಅರ್ಜಿ ಸಲ್ಲಿಸುವ ವಿಧಾನ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ಅನುಸೂಚಿತ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ

ನೋಂದಣಾಧಿಕಾರಿಗಳಿಗೆ ನಿಗದಿತ ನಮೂನೆಗಳಲ್ಲಿ ಆನ್‌ಲೈನ್ ಮೂಲಕವೇ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ನಿರಂತರ ಪರಿಷ್ಕರಣೆಯ ಅವಧಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಕಾರಿ ಡಾ. ನಾಗರಾಜ ಎಲ್., ವಿವಿಧ ರಾಜಕೀಯ ಪಕ್ಷದ ಮುಖಂಡರಾದ ರುದ್ರಪ್ಪ ಜಾಬಿನ್, ಅಮೀರಜಾನ್ ಬೇಪಾರಿ, ಶಂಕರ ಮೆಹರವಾಡೆ, ಸಂತೋಷ ಆಲದಕಟ್ಟಿ, ಹನುಮಂತಪ್ಪ ಕಬ್ಬಾರ, ಅಶೋಕ ಮರಿಯಮ್ಮನವರ ಇತರರಿದ್ದರು.

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ 6,28,297 ಪುರುಷ, 6,04,969 ಮಹಿಳಾ ಹಾಗೂ 28 ಇತರೆ ಮತದಾರರು ಸೇರಿ 12,33,294 ಮತದಾರರಿದ್ದಾರೆ.

ಕ್ಷೇತ್ರ ಪುರುಷ ಮಹಿಳಾ ಇತರೆ ಒಟ್ಟು

ಹಾನಗಲ್ ತಾಲೂಕಲ್ಲಿ 1,04,549 ಪುರುಷ, 99,784 ಮಹಿಳಾ, 2 ಇತರೆ, ಒಟ್ಟು 2,04,335 ಮತದಾರರಿದ್ದಾರೆ.

ಶಿಗ್ಗಾಂವಿ ತಾಲೂಕಲ್ಲಿ 1,13,367 ಪುರುಷ, 1,07,652 ಮಹಿಳಾ, 8 ಇತರೆ, ಒಟ್ಟು 2,21,027 ಮತದಾರರಿದ್ದಾರೆ.

ಹಾವೇರಿ ತಾಲೂಕಲ್ಲಿ 1,10,351 ಪುರುಷ, 1,05,927 ಮಹಿಳಾ, 8 ಇತರೆ, ಒಟ್ಟು 2,16,286 ಮತದಾರರಿದ್ದಾರೆ.

ಬ್ಯಾಡಗಿ ತಾಲೂಕಲ್ಲಿ 1,00,836 ಪುರುಷ, 98,270 ಮಹಿಳಾ, 2 ಇತರೆ, ಒಟ್ಟು 1,99,108 ಮತದಾರರಿದ್ದಾರೆ.

ಹಿರೇಕೆರೂರು ತಾಲೂಕಲ್ಲಿ 90,422 ಪುರುಷ, 86,837 ಮಹಿಳಾ, 4 ಇತರೆ, ಒಟ್ಟು 1,77,263 ಮತದಾರರಿದ್ದಾರೆ.

ರಾಣಿಬೆನ್ನೂರು ತಾಲೂಕಲ್ಲಿ 1,08,772 ಪುರುಷ, 1,06,499 ಮಹಿಳಾ, 4 ಇತರೆ, ಒಟ್ಟು 2,15,275 ಮತದಾರರಿದ್ದಾರೆ.13 ಸಾವಿರ ಮತದಾರರ ಹೆಚ್ಚಳ: 2026 ಆ. 24ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 6,22,375 ಪುರುಷ, 5,97,879 ಮಹಿಳಾ ಹಾಗೂ 27 ಜನ ತೃತೀಯ ಲಿಂಗಿಗಳು ಸೇರಿ 12,20,281 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 13,013 ಮತದಾರರು ಸೇರ್ಪಡೆಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು