ಚೇಳೈರು ನಂದಿನಿ ನದಿ ಕಲುಷಿತ: ವಿಶೇಷ ಸಭೆ ಕರೆಯುವ ಭರವಸೆ

KannadaprabhaNewsNetwork |  
Published : Jun 08, 2025, 11:59 PM ISTUpdated : Jun 09, 2025, 12:00 AM IST
ಮಲೀನ ಗೊಂಡ ಚೇಳೈರು ನಂದಿನಿ ನದಿ ಪ್ರದೇಶಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌  ಭೇಟಿ | Kannada Prabha

ಸಾರಾಂಶ

ತುಳುನಾಡಿನ ಧಾರ್ಮಿಕ ತಾಣ ಖಂಡಿಗೆ ಕ್ಷೇತ್ರಕ್ಕೆ ಸಂಬಂಧ ಪಟ್ಟ ನಂದಿನಿ ನದಿ ಕಲುಷಿತಗೊಂಡಿರುವ ಸಮಸ್ಯೆ ಬಗ್ಗೆ ಈ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಸ್ಯೆ ಪರಿಹಾರ ಮಾಡಿ ಕೊಡಲಾಗುವುದುದೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌

ಕನ್ನಡಪ್ರಭ ವಾರ್ತೆ ಮೂಲ್ಕಿತುಳುನಾಡಿನ ಧಾರ್ಮಿಕ ತಾಣ ಖಂಡಿಗೆ ಕ್ಷೇತ್ರಕ್ಕೆ ಸಂಬಂಧ ಪಟ್ಟ ನಂದಿನಿ ನದಿ ಕಲುಷಿತಗೊಂಡಿರುವ ಸಮಸ್ಯೆ ಬಗ್ಗೆ ಈ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಸ್ಯೆ ಪರಿಹಾರ ಮಾಡಿ ಕೊಡಲಾಗುವುದುದೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.ಖಂಡಿಗೆ ಕ್ಷೇತ್ರದ ಮೀನು ಹಿಡಿಯುವ ಜಾತ್ರೆಗೆ ನಂದಿನಿ ನದಿ ಮಲಿನಗೊಂಡು ಸಮಸ್ಯೆಯಾಗುತ್ತಿರುವ ಬಗ್ಗೆ ನಂದಿನಿ ನದಿ ಸಂರಕ್ಷಣಾ ಸಮಿತಿ ಖಂಡಿಗೆ ಚೇಳೈರು ಸೇರಿ ಜಿಲ್ಲಾಡಳಿತ ಮತ್ತು ಪರಿಸರ ಇಲಾಖೆಯ ವಿರುದ್ಧ ಇತ್ತೀಚೆಗೆ ಬ್ರಹತ್‌ ಪ್ರತಿಭಟನೆ ನಡೆದ್ದರು. ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಚೇಳೈರು ನಂದಿನಿ ನದಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರೆದುಕೊಂಡು ಬಂದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು. ಅದರಂತೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಸ್ಥಳೀಯರಿಂದ ಸಮಸ್ಯೆ ಆಲಿಸಿದರು.ಚೇಳೈರು ಖಂಡಿಗೆ ನಂದಿನಿ ನದಿಗೆ ಮುಂಚೂರು ವೆಟ್ ವೆಲ್‌ ಹತ್ತಿರದ ಒಳಚರಂಡಿಯ ಕೊಳಚೆ ನೀರು ಕೊಡಿಪಾಡಿಯಲ್ಲಿ ನಿರ್ಮಾಣವಾಗಿರುವ ತ್ಯಾಜ್ಯ ಸಂಸ್ಕರಣಾ ಘಟಕದ ನೀರು, ಚೊಕ್ಕಬೆಟ್ಟು ಪರಿಸರದ ಮನೆಯ ತ್ಯಾಜ್ಯ ನೀರು, ಖಾಸಗಿ ಅಸ್ಪತ್ರೆ, ಕಾಲೇಜು, ವಸತಿ ಗೃಹ ಮತ್ತು ಹೋಟೇಲ್ ಗಳ ತ್ಯಾಜ್ಯ ನೀರು ಬೀಡುವುದರಿಂದ ನದಿ ಸಂಪೂರ್ಣ ಕಲುಷಿತಗೊಂಡಿದೆ. ಇದರಿಂದಾಗಿ ಚೇಳೈರು ಖಂಡಿಗೆ ಭಾಗದ ಅನೇಕ ಕೃಷಿಯನ್ನೆ ಅವಲಂಬಿತ ಕುಟುಂಬಗಳು ಕೃಷಿ ಮಾಡದ ಪರಿಸ್ಥಿತಿ ಎದುರಾಗಿದೆ. ಕುಡಿಯುವ ನೀರಿಗೂ ಸಮಸ್ಯೆಯಾಗಿದ್ದು ಬಾವಿಗಳು ಮಲಿನಗೊಂಡಿವೆ. ಖಂಡಿಗೆ ದೈವಸ್ಥಾನದ ಮೀನು ಹಿಡಿಯುವ ವಿಶೇಷ ಜಾತ್ರೆ ನಿಲ್ಲುವ ಹಂತಕ್ಕೆ ತಲುಪಿದೆ. ಜಾನುವಾರುಗಳಿಗೆ ನೀರು ಕುಡಿಯಲು ಮತ್ತು ಮೇವು ತಿನ್ನದ ಹೀನಾಯ ಪರಿಸ್ಥಿತಿ ಎದುರಾಗಿದ್ದು ಬಾವಿಯ ನೀರು ಕುಡಿದ ಅನೇಕ ಜನರು ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಇತಿಹಾಸ ಪ್ರಸಿದ್ಧ ದೈವಸ್ಥಾನದ ಪಾವಿತ್ರ್ಯತೆ ವಿಷಯವಾಗಿದ್ದು ಇದಕ್ಕೆ ಶಾಶ್ವತ ಪರಿಹಾರ ಸರ್ಕಾರದ ವತಿಯಿಂದ ಮಾಡಬೇಕೆಂದು ಸಚಿವರಲ್ಲಿ ವಿನಂತಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅಪರ ಜಿಲ್ಲಾಧಿಕಾರಿ ಸಂತೋಷ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ದನ್, ಆಯುಕ್ತ ರವಿಚಂದ್ರ ನಾಯಕ್, ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಮೂಲ್ಕಿ ತಹಸೀಲ್ದಾರ್‌ ಡಾ.ಅರ್ಚನಾ ಭಟ್‌, ಉಪ ತಹಸೀಲ್ದಾರ್‌ ದಿಲೀಪ್‌ ರೋಡ್ಕರ್‌, ಸುರತ್ಕಲ್ ಕಂದಾಯ ಅಧಿಕಾರಿ ಪ್ರಸಾದ್, ವಕೀಲ ವಿನಯರಾಜ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾಂಗ್ರೆಸ್ ಮುಖಂಡರಾದ ವಸಂತಗ ಬೇರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''