ರಾಸಾಯನಿಕ ಗೊಬ್ರದಿಂದ ಮಣ್ಣಿನ ಆರೋಗ್ಯ ನಾಶ

KannadaprabhaNewsNetwork |  
Published : Dec 06, 2025, 01:30 AM IST
ಬೆಂ.ಗ್ರಾ ಜಿಲ್ಲಾ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ರೈತರು ದ್ರಾಕ್ಷಿ, ಗುಲಾಬಿ ಹಾಗೂ ತರಕಾರಿ ಬೆಳೆಯುತ್ತಿರುತ್ತಾರೆ. ತರಕಾರಿಗಳಿಗೆ ಹೆಚ್ಚಿನ ಪ್ರಮಾಣದ ರಾಸಾಯನಿಕ ಗೊಬ್ಬರ ನೀಡುವುದರಿಂದ ಮಣ್ಣಿನಲ್ಲಿ ಪೋಷಕಾಂಶಗಳ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಬೆಳೆಗೆ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗುತ್ತಿದೆ. ಮಣ್ಣಿನ ಆರೋಗ್ಯ ಹದಗೆಡುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಕಳವಳ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ರೈತರು ದ್ರಾಕ್ಷಿ, ಗುಲಾಬಿ ಹಾಗೂ ತರಕಾರಿ ಬೆಳೆಯುತ್ತಿರುತ್ತಾರೆ. ತರಕಾರಿಗಳಿಗೆ ಹೆಚ್ಚಿನ ಪ್ರಮಾಣದ ರಾಸಾಯನಿಕ ಗೊಬ್ಬರ ನೀಡುವುದರಿಂದ ಮಣ್ಣಿನಲ್ಲಿ ಪೋಷಕಾಂಶಗಳ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಬೆಳೆಗೆ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗುತ್ತಿದೆ. ಮಣ್ಣಿನ ಆರೋಗ್ಯ ಹದಗೆಡುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹಾಡೋನಹಳ್ಳಿಯಲ್ಲಿರುವ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಣ್ಣು ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಣ್ಣು ವಿಜ್ಞಾನಿ ಡಾ.ಪಿ.ವೀರನಾಗಪ್ಪ ಮಾತನಾಡಿ, 2025ರ ವಿಶ್ವ ಮಣ್ಣು ದಿನಾಚರಣೆಯ ಘೋಷವಾಕ್ಯ ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು ಎಂಬುದಾಗಿದ್ದು, ವಿಶ್ವ ಮಣ್ಣು ದಿನವನ್ನು ಪ್ರಪಂಚದಾದ್ಯಂತ ಡಿಸೆಂಬರ್ 5ರಂದು

ಥೈಲ್ಯಾಂಡ್ ರಾಜ ಅಬ್ದುಲ್ ದೇಶ್ ಭೂಮಿ ಬೋಲ್ ಇವರ ಹುಟ್ಟುಹಬ್ಬದ ಸ್ಮರಣಾರ್ಥ ಆಚರಿಸಲಾಗುತ್ತದೆ ಎಂದರು.

ಮಣ್ಣು ನಾಗರಿಕತೆಯ ಮೂಲ. ಹಲವಾರು ಜೀವಿಗಳ ಆವಾಸಸ್ಥಾನ. ಮಣ್ಣಿನಿಂದ ಬೆಳೆಗಳಿಗೆ ಪೋಷಕಾಂಶಗಳು ದೊರಕುತ್ತವೆ. ಮನುಷ್ಯನ ಆರೋಗ್ಯ ಮಣ್ಣಿನ ಆರೋಗ್ಯದ ಮೇಲೆ ನೇರವಾಗಿ ಅವಲಂಬನೆ ಆಗಿರುತ್ತದೆ. ಕೃಷಿಯಲ್ಲಿ ಅಧಿಕ ರಾಸಾಯನಿಕ ಗೊಬ್ಬರಗಳ ಬಳಕೆ ಅಂತರ್ಜಲ ಮಟ್ಟ ಕುಸಿಯುತ್ತಿರುವುದು, ಬೆಳೆಗಳಲ್ಲಿ ಹೆಚ್ಚಿನ ನೀರಿನ ಬೇಡಿಕೆ ಹಾಗೂ ಹಳ್ಳ, ಕೆರೆ ಮತ್ತು ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಲು, ಮಣ್ಣಿನ ಫಲವತ್ತತೆ ಕ್ಷೀಣಿಸಲು ಹಲ ಕಾರಣಗಳು ಎಂದರು.

ಕೃಷಿಯಲ್ಲಿ ವಿಶೇಷವಾಗಿ ಸಾವಯವ ಪದಾರ್ಥಗಳು ನೈಸರ್ಗಿಕ ಕೃಷಿಯ ಅಳವಡಿಕೆ. ನಗರ ಪ್ರದೇಶದಲ್ಲಿ ನಾಗರಿಕರು ಸೂಕ್ತ ಕಸ ಮತ್ತು ತ್ಯಾಜ್ಯ ನಿರ್ವಹಣೆಯ ಮೂಲಕ ತಮ್ಮ ತಾರಸಿ ಪ್ರದೇಶದಲ್ಲಿ ತಮಗೆ ಬೇಕಾಗುವ ತರಕಾರಿ ಅಥವಾ ಸೊಪ್ಪುಗಳನ್ನು ತಾವೇ ಬೆಳೆದುಕೊಳ್ಳಬಹುದು. ಜೈವಿಕ ಗೊಬ್ಬರಗಳ ಬಳಕೆ ಮಣ್ಣಿನ ಮಾಲಿನ್ಯವನ್ನು ಕಡಿಮೆ ಮಾಡಲು ಸೂಕ್ತ ಮಣ್ಣು ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಅಲ್ಲದೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಣ್ಣು ಮತ್ತು ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿ, ಫಲಿತಾಂಶದ ಆಧಾರದ ಮೇಲೆ ಪೋಷಕಾಂಶಗಳನ್ನು ಬೆಳೆಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ರೇಣುಕಾ ಪ್ರಸನ್ನ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪಂಕಜ ಮತ್ತಿತರ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

ಫೋಟೋ-

5ಕೆಡಿಬಿಪಿ3- ಬೆಂ.ಗ್ರಾ ಜಿಲ್ಲಾ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮಗಳ ಪ್ರಗತಿಯಿಂದ ದೇಶದ ಅಭಿವೃದ್ಧಿ ಸಾಧ್ಯ
ಅಯೋಧ್ಯೆಂತೆ ದತ್ತಪೀಠದಲ್ಲೂ ಧರ್ಮಧ್ವಜ ಹಾರಾಡಲಿ