ಕನ್ನಡಪ್ರಭ ವಾರ್ತೆ ಹೊಸಕೋಟೆ
ಆಫ್-ಸೈಟ್ ತುರ್ತು ಅಣುಕು ಪ್ರದರ್ಶನದಲ್ಲಿ ಸುಮಾರು 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 12 ಆ್ಯಂಬ್ಯುಲೆನ್ಸ್ ವಾಹನಗಳು, ವೈದ್ಯರು ಸೇರಿ ವಿವಿಧ ಇಲಾಖೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. ಎಮ್.ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು. ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ ೩ ಕಾರ್ಖಾನೆಗಳಿಂದ ಸುಮಾರು 400 ಕಾರ್ಮಿಕರನ್ನು ರಕ್ಷಿಸಿ ವಾಗಟ ಗ್ರಾಮದ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು, ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.