ದೊಡ್ಡಬಳ್ಳಾಪುರ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು.
ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. DDMA ಯ ಸಹಾಯದಿಂದ ಪುನರ್ವಸತಿ ಕೇಂದ್ರಗಳಿಗೆ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೈಗಾರಿಕಾ ಪ್ರದೇಶಕ್ಕೆ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು. ಮತ್ತು ಪಕ್ಕದ ಕಾರ್ಖಾನೆಯಾದ Grover Jumpper Vineryard ಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಡಿ-ಬೀಫಿಂಗ್ ನಡೆಸಲಾಯಿತು.
ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್‌ಡಿಆರ್‌ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು. ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ ಕಾರ್ಖಾನೆಯಲ್ಲಿ ಸುಮಾರು 265ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಿ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿಯಿರುವ ಪುನರ್ವಸತಿ ಕೇಂದ್ರಗಳಾದ ಅಂಬೇಡ್ಕರ್ ಭವನ ಮತ್ತು ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಯಿತು.ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪ್ರದೇಶದ ಮಾರ್ಗಗಳನ್ನು DDMA ಯ ಸಹಯೋಗದೊಂದಿಗೆ ಸುತ್ತುವರಿದು ಟ್ರಾಫಿಕ್ ನಿಯಂತ್ರಿಸಲಾಯಿತು. ಈ ಸಮಯದಲ್ಲಿ 02 ಕಾರ್ಮಿಕರು ಮೃತಪಟ್ಟಿದ್ದು, ಸಣ್ಣ-ಪುಟ್ಟ ಗಾಯಗಳಾಗಿರುವ 8 ಕಾರ್ಮಿಕರನ್ನು, ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು. ಅತೀ ಹೆಚ್ಚು ಗಾಯಗಳಾದ 2 ಕಾರ್ಮಿಕರನ್ನು ವಿಕ್ಟೋರಿಯಾ ಮತ್ತು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.
30ಕೆಡಿಬಿಪಿ5- ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಮುಸಾಶಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ ಗುರುವಾರ ನಡೆಯಿತು.