ಬ್ರಿಟಿಷರ ವಿರುದ್ಧ ಹೋರಾಡಿ ಜಯ ತಂದುಕೊಡುವಲ್ಲಿ ಚೆನ್ನಮ್ಮ ಅಪ್ರತಿಮ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಕೂಡಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಕುಂದಗೋಳ: ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಜಯಿಸಿದ ದಿಟ್ಟ ಮಹಿಳೆ ಎಂದು ಕೂಡಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕುಂದಗೋಳ ಘಟಕ ವತಿಯಿಂದ ನಡೆದ ವೀರರಾಣಿ ಕಿತ್ತೂರ ಚೆನ್ನಮ್ಮ ಜಯಂತ್ಯುತ್ಸವ ಹಾಗೂ ವಿಜಯೋತ್ಸವದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಬ್ರಿಟಿಷರ ವಿರುದ್ಧ ಹೋರಾಡಿ ಜಯ ತಂದುಕೊಡುವಲ್ಲಿ ಚೆನ್ನಮ್ಮ ಅಪ್ರತಿಮ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದರು. ಡಿ. 9ರಂದು ಬೆಳಗಾವಿ ಸುವರ್ಣಸೌಧದ ಎದುರಿಗೆ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ಸುವರ್ಣ ಸೌಧಕ್ಕೆ ಹೋಗುವ ಮಾರ್ಗವನ್ನು ಬಂದ್ ಮಾಡಿ ಮೀಸಲಾತಿ ಕೇಳೋಣ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳ ಜೊತೆ ಬಂದು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಪಂಚಗೃಹ ಹಿರೇಮಠದ ಶಿತಿಕಂಠೇಶ್ವರ ಶಿವಾಚಾರ್ಯರು, ಕಲ್ಯಾಣಪುರದ ಬಸವಣ್ಣಜ್ಜನವರು, ಶಿವಾನಂದ ಮಠದ ಶಿವಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು. ಹುಬ್ಬಳ್ಳಿ ಕಾಲೇಜಿನ ಪ್ರಾಂಶುಪಾಲ ಎಫ್.ಸಿ. ಸೊರಟೂರ ಉಪನ್ಯಾಸ ನೀಡಿದರು.
ಶಾಸಕ ಎಂ.ಆರ್. ಪಾಟೀಲ, ಮಾಜಿ ಸಚಿವ ಪಿ.ಸಿ. ಸಿದ್ದನಗೌಡ್ರ, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ಎಂ.ಎಸ್. ಅಕ್ಕಿ, ಮುಖಂಡರಾದ ಅರವಿಂದ ಕಟಗಿ, ಗೌಡಪ್ಪಗೌಡ ಪಾಟೀಲ, ಟಿ.ಎಸ್. ಗೌಡಪ್ಪನವರ, ಉಮೇಶ ಹೆಬಸೂರ, ಗಂಗಾಧರ ಕುನ್ನೂರ, ಎಸ್.ಎಫ್. ನಿರಂಜನಗೌಡ್ರ ಸೇರಿದಂತೆ ಹಲವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.