ಕೆಚ್ಚೆದೆ ಹೋರಾಟಗಳಿಗೆ ಹೆಸರಾಗಿದ್ದ ಚೆನ್ನಮ್ಮ: ತಹಸೀಲ್ದಾರ್‌ ಗೋವಿಂದಪ್ಪ

KannadaprabhaNewsNetwork |  
Published : Oct 24, 2024, 12:37 AM IST
ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ತಾಲೂಕು ಆಡಳಿತ ಹಾಗೂ ನ್ಯಾಮತಿ ತಾಲೂಕು ಪಂಚಮಸಾಲಿ ವೀರಶೈವ ಸಮಾಜ ಭಾಂಧವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ ನಡೆಯಿತು. | Kannada Prabha

ಸಾರಾಂಶ

ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆ ತರಬೇತಿ ಪಡೆದ ಕಿತ್ತೂರು ರಾಣಿ ಚೆನ್ನಮ್ಮ ಕೆಚ್ಚೆದೆಯ ಹೋರಾಟಗಳಿಗೆ ಹೆಸರುವಾಸಿಯಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಚೆನ್ನಮ್ಮ ಎಂದು ನ್ಯಾಮತಿ ತಾಲೂಕು ತಹಸೀಲ್ದಾರ್‌ ಎಚ್‌.ಬಿ. ಗೋವಿಂದಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ನ್ಯಾಮತಿ

ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆ ತರಬೇತಿ ಪಡೆದ ಕಿತ್ತೂರು ರಾಣಿ ಚೆನ್ನಮ್ಮ ಕೆಚ್ಚೆದೆಯ ಹೋರಾಟಗಳಿಗೆ ಹೆಸರುವಾಸಿಯಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಚೆನ್ನಮ್ಮ ಎಂದು ನ್ಯಾಮತಿ ತಾಲೂಕು ತಹಸೀಲ್ದಾರ್‌ ಎಚ್‌.ಬಿ. ಗೋವಿಂದಪ್ಪ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ತಾಲೂಕು ಆಡಳಿತ ಹಾಗೂ ನ್ಯಾಮತಿ ತಾಲೂಕು ಪಂಚಮಸಾಲಿ ವೀರಶೈವ ಸಮಾಜ ಬಾಂಧವರ ಆಶ್ರಯದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಣಿ ಚೆನ್ನಮ್ಮ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಬ್ರಿಟಿಷರು ಕಪ್ಪ ಕೇಳಿದಾಗ ನಿಮಗೇಕೆ ಕೊಡಬೇಕು ಕಪ್ಪ ಎಂದು ಉರಿಗಣ್ಣಿನಿಂದ, ಏಕಾಂಗಿಯಾಗಿ, ಧೈರ್ಯದಿಂದ ಎದುರಿಸಿದ್ದ ಧೀರಮಹಿಳೆ. ಬ್ರಿಟಿಷರ ಆಳ್ವಿಕೆಯ ವಿರುದ್ಧ ಅನೇಕ ಮಹಿಳೆಯರನ್ನು ಸಂಘಟಿಸಿದ್ದ ಚೆನ್ನಮ್ಮ, ಕೇವಲ ಒಂದು ಸಮಾಜಕ್ಕೆ ಸೀಮಿತವಾಗಿರದೇ ಇಡೀ ಕಿತ್ತೂರು ನಾಡಿನ ರಾಣಿ ಚೆನ್ನಮ್ಮ ಎಂದೇ ಪ್ರಸಿದ್ಧಿಯಾಗಿದ್ದಾರೆ ಎಂದ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ, ಸಾಹಸಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಎನ್‌.ಡಿ. ಪಂಚಾಕ್ಷರಪ್ಪ, ತಾಲೂಕು ಅಧ್ಯಕ್ಷ ಪೂಜಾರ್‌ ಚಂದ್ರಶೇಖರ್‌, ಹಲಗೇರಿ ವೀರೇಶ್‌, ರವಿಕುಮಾರ್‌, ನುಚ್ಚಿನ ಪ್ರಕಾಶ್‌, ಚಿದಾನಂದ, ತಾಲೂಕು ಕಚೇರಿ ಸಿಬ್ಬಂದಿ ಮತ್ತಿತರರಿದ್ದರು.

- - - (-ಫೋಟೋ:)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ