ನರೇಗಲ್ಲ: ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು, ಅವರು ಸ್ವಾತಂತ್ರ್ಯದ ಹೋರಾಟದ ಕಿಚ್ಚು ಹಚ್ಚಿದ ವೀರ ಮಹಿಳೆ ಎಂದು ಸಿದ್ದಣ್ಣ ಬಂಡಿ ತಿಳಿಸಿದರು.
ಚೆನ್ನಮ್ಮ ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟಿಷ್ ಸರ್ಕಾರ ಜಾರಿಗೊಳಿಸಿದ್ದ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯನ್ನು ವಿರೋಧಿಸಿದ ರಾಣಿ ಚೆನ್ನಮ್ಮ ಬ್ರಿಟಿಷರಿಗೆ ಸಲ್ಲಿಸಬೇಕಾಗಿದ್ದ ಕಪ್ಪ ಕಾಣಿಕೆ ಕೊಡುವುದನ್ನು ನಿರಾಕರಿಸಿ’ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರು ಚೆನ್ನಮ್ಮ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ. ಪ್ರತಿಯೊಬ್ಬ ಮಹಿಳೆಯರು ಕೂಡ ಅದನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಗಳು ಮಾತಾನಾಡಿ, ಚೆನ್ನಮ್ಮನನ್ನು ಕೇವಲ ಒಂದು ಜಾತಿಗೆ ಮೀಸಲಾಗದೆ ಎಲ್ಲರು ಅವರು ತತ್ವಾದರ್ಶಗಳನ್ನು ಬೆಳೆಸಿಕೊಂಡು ಮುಂದೆ ಬರಬೇಕು ದೇಶಕ್ಕೆ ಅವರು ತಮ್ಮ ಪ್ರಾಣ ಸಮರ್ಪಣೆ ಮಾಡಿದರು, ಅಂತಹ ಮಹಾನ್ ಹೋರಾಟಗಾರ್ತಿ ಮಾಡಿದ ಶೌರ್ಯ ಸಾಧನೆ ನೆನೆಯುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ದೇಶಿಸಿ ಡಿಡಿಪಿಐ ಆರ್.ಎಸ್. ಬುರಡಿ ಮುಂತಾದವರು ಮಾತನಾಡಿದರು.