ಚೆನ್ನಮ್ಮನ ಸ್ವಾಭಿಮಾನ, ಗುಣ ಅನುಕರಣೀಯ

KannadaprabhaNewsNetwork |  
Published : Oct 24, 2025, 01:00 AM IST
ಕುರುಗೋಡು  03 ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು | Kannada Prabha

ಸಾರಾಂಶ

ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ವಾಭಿಮಾನ ಮತ್ತು ಧೈರ್ಯ ಗುಣ ಮೆಚ್ಚುವಂತದ್ದು

ಕುರುಗೋಡು: ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಹಳೆ ಮೊಳಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ವಾಭಿಮಾನ ಮತ್ತು ಧೈರ್ಯ ಗುಣ ಮೆಚ್ಚುವಂತದ್ದು ಎಂದು ತಹಶೀಲ್ದಾರ್ ನರಸಪ್ಪ ಶ್ಲಾಘಿಸಿದರು.

ಇಲ್ಲಿನ ತಾಲೂಕು ಆಡಳಿತ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬಲ್ಲರು ಎನ್ನುವುದಕ್ಕೆ ಕಿತ್ತೂರು ರಾಣಿ ಚನ್ನಮ್ಮ ಉತ್ತಮ ನಿದರ್ಶನ. ಗಂಡು ಮಕ್ಕಳಂತೆ, ಹೆಣ್ಣುಮಕ್ಕಳಿಗೂ ಸಮಾನ ಶಿಕ್ಷಣಕೊಡಿಸಬೇಕು ಎಂದರು.

ಆತ್ಮರಕ್ಷಣೆಗಾಗಿ ರಕ್ಷಣಾ ಕಲೆಗಳನ್ನು ಮೈಗೂಡಿಸಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ನವರ ಆದರ್ಶಗುಣಗಳನ್ನು ಎಲ್ಲರೂ ಪಾಲಿಸಬೇಕು. ಪುಟ್ಟ ರಾಜ್ಯವಾಗಿದ್ದ ಕಿತ್ತೂರಿನ ಮೇಲೆ ಬ್ರಿಟಿಷರು ಆಕ್ರಮಣ ಮಾಡಿದಾಗ ಎದೆಗುಂದದೇ ಹೋರಾಡಿದ ಕೀರ್ತಿ ರಾಣಿ ಚೆನ್ನಮ್ಮಗೆ ಸಲ್ಲುತ್ತದೆ. ಅವರು ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ, ಸದ್ಗುಣಗಳ ಖನಿ. ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿ. ಇಂದು ಚನ್ನಮ್ಮ ಜಯಂತಿ ಆಚರಣೆ ಮಾಡಲಾಗುತ್ತಿದ್ದರೂ, ವಾಸ್ತವವಾಗಿ ಇದು ಕಿತ್ತೂರು ಸಂಸ್ಥಾನ ಬ್ರಿಟಿಷರ ವಿರುದ್ಧ ವಿಜಯೋತ್ಸವ ಸಾಧಿಸಿದ ದಿನವಾಗಿದೆ ಎಂದರು.

ಗ್ರೇಡ್-೨ತಹಶೀಲ್ದಾರ್ ಮಲ್ಲೇಶಪ್ಪ, ಶಿರಸ್ತೇದಾರ್ ವಿಜಯಕುಮಾರ್, ಆರ್ ಐ ಸುರೇಶ್ ಸಿಬ್ಬಂದಿ ಶ್ವೇತಾ, ಲತಾ, ಸುಮಾ, ಸ್ವಾತಿ, ಚಂದ್ರಮ್ಮ ಮತ್ತು ರಾಜೇಶ್ವರಿ ಇದ್ದರು.

ಕುರುಗೋಡು ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು