ಚೇರಂಬಾಣೆ: ವಾರ್ಷಿಕ ಕ್ರೀಡಾ ದಿನಾಚರಣೆ

KannadaprabhaNewsNetwork |  
Published : Dec 20, 2025, 03:00 AM IST
ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆಯಲ್ಲಿ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ ಶಾಲಾ ಆಟದ ಮೈದಾನದಲ್ಲಿ ನೆರವೇರಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ ಶಾಲಾ ಆಟದ ಮೈದಾನದಲ್ಲಿ ನೆರವೇರಿತು.

ಶಾಲಾ ಆಡಳಿತ ಮಂಡಳಿ ಸದಸ್ಯರು ಕುಟ್ಟೆಟಿರ ಕುಂಞಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಮಡಿಕೇರಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಪೊನ್ನಚನ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಕ್ರೀಡಾಂಗಣ ಒದಗಿಸಿಕೊಟ್ಟು ಕ್ರೀಡಾ ಆಸಕ್ತಿ ಬೆಳೆಸುವುದು ಎಲ್ಲರ ಕರ್ತವ್ಯವಾಗಿರುತ್ತದೆ ಎಂದರು.

ಮತ್ತೊಬ್ಬ ಮುಖ್ಯ ಅತಿಥಿ ತಾತಪಂಡ ಜ್ಯೋತಿ ಸೋಮಯ್ಯ ಮಾತನಾಡಿ, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಆದಷ್ಟು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ಶಿಸ್ತನ್ನು ಮೈಗೂಡಿಸಿ ಹಿರಿಯರಿಗೆ ಗೌರವ ನೀಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದರು.

ವಿದ್ಯಾರ್ಥಿಗಳಿಂದ ನೃತ್ಯ, ಯೋಗ ಕರಾಟೆ, ಹಾಡು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಮುಖ್ಯ ಅತಿಥಿಗಳಿಂದ ಬಹುಮಾನ ವಿತರಣೆ ನಡೆಯಿತು. ಕ್ರೀಡೆ ಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕುಟ್ಟೆಟ್ಟಿರ ಕುಂಞಪ್ಪ, ಮೊಟ್ಟೆಯಂಡ ಸುಗು ತಮ್ಮಯ್ಯ ಶಾಲಾ ವ್ಯವಸ್ಥಾಪಕರಾದ ನಾಟೋಳಂಡ ವಿಜು, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಕೆ.ಎಸ್ ರಾಮಾಮೂರ್ತಿ ಹಾಜರಿದ್ದರು.

ಬಹುಮಾನ ವಿತರಣೆ ಕಾರ್ಯಕ್ರಮವನ್ನು ರಾಧಿಕ ಪಿ.ಸಿ ನೆರವೇರಿಸಿಕೊಟ್ಟರು.

ಕಾರ್ಯಕ್ರಮದ ನಿರೂಪಣೆಯನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸ್ವರೂಪ್ ಕೆ. ಬಿ., ಸ್ವಾಗತ ಭಾಷಣವನ್ನು ಇಂಗ್ಲೀಷ್ ಶಿಕ್ಷಕರಾದ ಲೋಹಿತ್ ಪಿ. ಎಲ್., ವಂದನಾರ್ಪಣೆಯನ್ನು ಗಣಿತ ಶಿಕ್ಷಕಿ ರಾಜೇಶ್ವರಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿ, ಚೈತ್ರ ನೆರವಿಸಿದರು. ಕ್ರೀಡಾಕೂಟದ ತೀರ್ಪುಗಾರರಾಗಿ ಮನೋಜ್ ಕುಮಾರ್, ಸಜನಿ ಎ. ಟಿ, ಬೃಂದಾ ಕವನ್, ಸಂಧ್ಯಾ ಬಿ.ಎಸ್, ಅನಿಲ್ ಯು. ಟಿ, ಸೀಮಾ ಗಣಪತಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐತಿಹಾಸಿಕ ಸ್ಮಾರಕ ಮುಂದಿನ ಪೀಳಿಗೆಗೆ ಉಳಿಯಲಿ: ಡಿಸಿ ಸಂಗಪ್ಪ
ಬಲಿಜ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ