ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಂತ ಖರ್ಚಿನಲ್ಲಿ ಮೂರ್ತಿಯನ್ನು ಕೊಡುಗೆ ನೀಡಿದ್ದು, ಗ್ರಾಮಕ್ಕೆ ಆಗಮಿಸಿದ ಸಚಿವೆಯನ್ನು ಗ್ರಾಮ ಪ್ರವೇಶದಿಂದಲೇ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಡೊಳ್ಳು-ತಾಶೆಗಳ ಘೋಷ, ಹೂವಿನ ಮಳೆಯ ಸ್ವಾಗತ ಮತ್ತು ಘೋಷಣೆಗಳ ನಡುವೆ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಬಾರಾಮತಿಯಂತೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನನ್ನ ಕನಸು ಈಗ ಸಾಕಾರವಾಗುತ್ತಿದೆ. ಇನ್ನಷ್ಟು ಅಭಿವೃದ್ಧಿಗೆ ನಿಮ್ಮೆಲ್ಲರ ಮಾರ್ಗದರ್ಶನ ಅಗತ್ಯ ಎಂದರು.ಸುವರ್ಣ ವಿಧಾನಸೌಧವಿದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೆಸರು ಅಷ್ಟಾಗಿ ಪರಿಚಿತವಾಗಿರಲಿಲ್ಲ. ಆದರೆ,ಈಗ ರಾಜ್ಯದ ಎಲ್ಲೆಡೆ ಕ್ಷೇತ್ರ ಚಿರಪರಿಚಿತವಾಗಿದೆ. ಕಳೆದ ವರ್ಷಗಳಲ್ಲಿ ಕ್ಷೇತ್ರದ 154 ಮಂದಿರಗಳ ಜೀರ್ಣೋದ್ಧಾರ ಹಾಗೂ ಎಲ್ಲ ಗ್ರಾಮಗಳಲ್ಲಿ ಮಹಾತ್ಮರ ಪುತ್ಥಳಿ ಸ್ಥಾಪನೆ ಮಾಡಲಾಗಿದೆ. ಚುನಾವಣೆ ಹೊರತಾಗಿಯೂ ವರ್ಷಪೂರ್ತಿ ನಿಮ್ಮ ಜೊತೆಯಲ್ಲೇ ಕೆಲಸ ಮಾಡುತ್ತೇನೆ. ಕಳೆದ 15 ವರ್ಷಗಳಿಂದ ಕ್ಷೇತ್ರದ ಸೇವೆಯಲ್ಲಿದ್ದೇನೆ.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಧರ್ಮ ಮತ್ತು ಸಂಸ್ಕೃತಿ ಉಳಿಯಲು ಇಂತಹ ಮಹತ್ವದ ಕಾರ್ಯಗಳು ಅಗತ್ಯ. ಯುವಕರಲ್ಲಿ ದ್ವೇಷವಲ್ಲ, ಸಂಸ್ಕೃತಿ ಬಗ್ಗೆ ಗೌರವ ಬೆಳೆಸಬೇಕು. ಲಕ್ಷ್ಮೀ ಹೆಬ್ಬಾಳಕರ್ ಅವರ ಸೇವಾ ಕಾರ್ಯಗಳಿಂದ ಸಮಾಜದಲ್ಲಿ ಧರ್ಮ-ಸಂಸ್ಕೃತಿ ಬಲವಾಗುತ್ತಿದೆ. ಕಳೆದ ಎರಡುವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಸುಮಾರು ₹ 1500 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ತಿಳಿಸಿದರು.