ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ

KannadaprabhaNewsNetwork |  
Published : Feb 20, 2026, 03:00 AM IST
ಚಿದಂಬರ ಬೈಕಂಪಾಡಿ | Kannada Prabha

ಸಾರಾಂಶ

ಮಾರ್ಚ್ 27, 28ರಂದು ಬಿ.ಸಿ.ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ 28ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.

ಮಂಗಳೂರು: ಮಾರ್ಚ್ 27, 28ರಂದು ಬಿ.ಸಿ.ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ 28ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ್ ತಿಳಿಸಿದ್ದಾರೆ.

ಪತ್ರಕರ್ತ, ಲೇಖಕ ಚಿದಂಬರ ಬೈಕಂಪಾಡಿ ಅವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದಾರೆ. ಕನ್ನಡದ ಮಹತ್ವದ ಕವಿಯಾಗಿ ಗುರುತಿಸಿಕೊಂಡಿರುವ ಅವರು, ಬೇಗುದಿ, ವಾಸ್ತವದ ಲೆಕ್ಕಾಚಾರ, ಕಪ್ಪು ಹುಡುಗ ಇತ್ಯಾದಿ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಮಂಗಳೂರು ವಿವಿ ಸೆನೆಟ್ ಸದಸ್ಯರಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇದು ಮುಂಗಾರು ಎಂಬ ಅವರ ಕೃತಿ ಪತ್ರಿಕೋದ್ಯಮದ ಬಗ್ಗೆಗಿನ ಪುಸ್ತಕ. ಹಿರಿಯ ಪತ್ರಕರ್ತರಾದ ವಡ್ಡರ್ಸೆ ಅವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ್ಯ ವರದಿಗಾರರಾಗಿ, ಕನ್ನಡಪ್ರಭ ದಿನಪತ್ರಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ ವರದಿ ಮತ್ತು ಲೇಖನಗಳ ಮೂಲಕ ಕನ್ನಡ ಮಾಧ್ಯಮ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಮುಂಗಾರು ಎನ್ನುವ ಪತ್ರಿಕೋದ್ಯಮದ ಕುರಿತ ಪುಸ್ತಕ, ಪ.ಗೋ ಪ್ರಪಂಚ – ಪತ್ರಿಕೋದ್ಯಮ ಪುಸ್ತಕ, ರಾಜಕೀಯ ಒಳಸುಳಿಗಳು ಲೇಖನಗಳು ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಕೃತಿಗಳನ್ನು ಹೊರತಂದಿದ್ದಾರೆ.

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೈಕಂಪಾಡಿ ಅವರು ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ಪತ್ರಕರ್ತ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಖಿಲ ಭಾರತ ಆಕಾಶವಾಣಿ ವಾರ್ಷಿಕ ಪ್ರಶಸ್ತಿ ಬೈಕಂಪಾಡಿ ಅವರ ಬೆಂಗರೆ ಬಾನುಲಿ ಸಾಕ್ಷರೂಪಕಕ್ಕೆ ಒಲಿದು ಬಂದಿದೆ. ಬನ್ನಂಜೆ ರಾಮಾಚಾರ್ಯ ಪತ್ರಿಕೋದ್ಯಮ ಪ್ರಶಸ್ತಿ, ಪತ್ರಿಕೋದ್ಯಮ ಕ್ಷೇತ್ರದ ಇನ್ ಲ್ಯಾಂಡ್ ಅವಾರ್ಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅವಾರ್ಡ್, ಡಾ. ಕೋಟ ಶಿವರಾಮ ಕಾರಂತ ಪ್ರಶಸ್ತಿ ಮುಂತಾದ ಗೌರವಕ್ಕೆ ಪಾತ್ರರಾದ ಬೈಕಂಪಾಡಿ ಅವರು, 2025ನೇ ಸಾಲಿನ ಪತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಡಕೆ ಸಂಶೋಧನಾ ಕೃತಿ ಕ್ಯಾಂಪ್ಕೊ ಕಚೇರಿಯಲ್ಲಿ ಬಿಡುಗಡೆ
‘ಸೇವಾ ಭೂಷಣ’ ಪ್ರಶಸ್ತಿಗೆ ಯು. ಶ್ರೀಧರ್ ಆಯ್ಕೆ