19ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜಮಖಂಡಿಗೆ

KannadaprabhaNewsNetwork |  
Published : Oct 07, 2026, 04:15 AM IST
ಜಮಖಂಡಿ ಶಾಸಕ ಗುಡಗುಂಟಿ ಅವರ ಗೃಹ ಕಚೇರಿಯಲ್ಲಿ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಗೊಳಿಸಿದರು. ಮುಖಂಡರು ಇದ್ದರು | Kannada Prabha

ಸಾರಾಂಶ

ಜಮಖಂಡಿ ನಗರದಲ್ಲಿ ಅ.11 ರಿಂದ 21ರವರೆಗೆ ರಂಭಾಪುರಿ ಪೀಠದ ದಸರಾ ದರ್ಬಾರ್‌ ಶರನ್ನವರಾತ್ರಿ ಉತ್ಸವ ನಡೆಯಲಿದ್ದು, ಅ.19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರದಲ್ಲಿ ಅ.11 ರಿಂದ 21ರವರೆಗೆ ರಂಭಾಪುರಿ ಪೀಠದ ದಸರಾ ದರ್ಬಾರ್‌ ಶರನ್ನವರಾತ್ರಿ ಉತ್ಸವ ನಡೆಯಲಿದ್ದು, ಅ.19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು. ಗೃಹ ಕಚೇರಿಯಲ್ಲಿ ಮಂಗಳವಾರ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10ರಂದು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯರ ಪುರಪ್ರವೇಶ ನಡೆಯಲಿದ್ದು, ಅಡ್ಡಪಲ್ಲಕ್ಕಿ ಉತ್ಸವ ಮೂಲಕ ಜಗದ್ಗುರುಗಳನ್ನು ಸ್ವಾಗತಿಸಲಾಗುವುದು ಎಂದು ತಿಳಿಸಿದರು. ಧರ್ಮ ಸಮಾವೇಶದಲ್ಲಿ ನಾಡಿನ ವಿವಿಧ ಭಾಗಗಳ ಶಿವಾಚಾರ್ಯರು, ಸಚಿವರು, ಸಾಹಿತಿಗಳು, ವಿದ್ವಾಂಸರು, ಸಮಾಜ ಚಿಂತಕರು, ಕವಿ, ಕಲಾವಿದರು ಮತ್ತು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. 11ರಂದು ದಸರಾ ಧರ್ಮ ಸಮ್ಮೇಳನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗವಹಿಸಲಿದ್ದಾರೆ. 11 ದಿನಗಳ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಚಿವರು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕಲ್ಯಾಣ ಮಠದ ಗೌರಿಶಂಕರ ಸ್ವಾಮೀಜಿ, ಮುತ್ತಿನ ಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಸ್ವಾಮೀಜಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮುಖಂಡರಾದ ಈಶ್ವರ ಆದೆಪ್ಪನವರ, ಮಹದೇವಪ್ಪ ಇಟ್ಟಿ, ಮಲ್ಲು ದಾನಗೌಡ, ಅಜಯ ಕಡಪಟ್ಟಿ, ಸಂಗಮೇಶ ದಳವಾಯಿ ಯೋಗಪ್ಪ ಸವದಿ ಗಣೇಶ ಶಿರಗಣ್ಣವರ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಳು ಬಿದ್ದ ಸರ್ಕಾರಿ ವಸತಿ ಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಕಡಪಟ್ಟಿ ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ