ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ನಿರ್ಮಸಿರುವ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ಕೋಟಿ ರು.ವೆಚ್ಚದ ಪ್ರಜಾಸೌಧ ನಿರ್ಮಾಣಕ್ಕೆ ಚಾಲನೆ ನೀಡಿದರು.
ನಂತರ ಕಳೆದ ನಾಲ್ಕು ವರ್ಷದ ಹಿಂದೆ ಲೈಂಗಿಕ ದೌರ್ಜನ್ಯಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಸ್ಥರು ಬಾಲಕಿ ಹೆಸರನ್ನು ಪಟ್ಟಣದ ಪ್ರಮುಖ ವೃತ್ತಕ್ಕೆ ಇಡಬೇಕು ಎಂದು ಮನವಿ ಸಲ್ಲಿಸಿದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಸಚಿವ ಎಚ್.ಸಿ.ಮಹದೇವಪ್ಪ, ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಕೆ.ಎಂ.ಉದಯ್, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಎಸ್.ವಿ.ಲೋಕೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಎ.ಎಂ.ಸೋಮಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಪಾಲ್ಗೊಂಡಿದ್ದರು.
ಕಾರ್ಯಕರ್ತನಿಗೆ ಮಾಲೆ ಹಾಕಿದ ಸಿಎಂ:ಶಂಕುಸ್ಥಾಪನೆ ಮುಗಿಸಿ ಹೊರಟಿದ್ದ ವೇಳೆ ಪುರಸಭೆ ನಾಮನಿರ್ದೇಶಿತ ಸದಸ್ಯ ಆನಂದ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಲು ಮುಂದಾದರು. ಆದರೆ, ಅದೇ ಹೂವಿನ ಹಾರ ಪಡೆದ ಸಿಎಂ ಆನಂದ್‌ಗೆ ಹಾರ ಹಾಕಿ ಬೆನ್ನು ತಟ್ಟಿದರು.