ಸುತಗುಂಡಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

KannadaprabhaNewsNetwork |  
Published : Mar 31, 2026, 03:15 AM IST
(ಫೋಟೊ30ಬಿಕೆಟಿ5, ಬಾಗಲಕೋಟೆತಾಲೂಕಿನ ಸುತಗುಂಡಾರಗ್ರಾಮದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಮುಗಿದುತಮ ಯಾಚಿಸಿದರು. ಸಚಿವಆರ್.ಬಿ.ತಿಮ್ಮಾಪೂರ, ಉಮೇಶ ಮೇಟಿಇತರರಿದ್ದರು.) | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಭಾಗದ ಬಡವರಿಗೆ ತಲುಪಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಭಾಗದ ಬಡವರಿಗೆ ತಲುಪಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರೆ ಯಾರೂ ಕಿವಿಗೊಡಬೇಡಿ. ಈ ಭಾಗದಲ್ಲಿ ಎಚ್.ವೈ.ಮೇಟಿ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಸ್ಥಾನಕ್ಕೆ ಉಮೇಶ ಮೇಟಿ ಅವರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.

ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಆರತಿ ಬೆಳಗಿ ಸಾಂಪ್ರದಾಯಿಕ ಸ್ವಾಗತ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಅಭ್ಯರ್ಥಿ ಉಮೇಶ ಮೇಟಿ, ಮಹಾದೇವಿ ಮೇಟಿ, ಶ್ರೀಕರ ದೇಸಾಯಿ, ಗ್ರಾಮದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಸಿಎಂ ಸಮ್ಮುಖದಲ್ಲಿ ಅನೇಕ ಜನರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಹಳ್ಳೂರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಅವರ ಪುತ್ರ ಉಮೇಶ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕೋರಿದರು. ಸಚಿವ ಎಂ.ಬಿ.ಪಾಟೀಲ, ಮಾಜಿ ಸಚಿವ ಅಜಯಕುಮಾರ್ ಸರನಾಯಕ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಅಂತರದಿಂದ ಗೆಲ್ಲಿಸುವಂತೆ ವಿನಂತಿಸಿದರು.

ಅಮೀನಗಡ ಹಾಗೂ ಕಮತಗಿ ಪಟ್ಟಣದಲ್ಲಿ ನಡೆದ ಬಹಿರಂಗ ಪ್ರಚಾರದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಬಾಯಕ್ಕ ಮೇಟಿ ಮಾತನಾಡಿ, ಮಹಿಳೆಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಧಾರವಾಗಿದ್ದು, ಈ ಜನಪರ ಯೋಜನೆ ಜಾರಿಗೊಳಿಸಿದ ಕಾಂಗ್ರೆಸ್ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಸಚಿವ ಸತೀಶ ಜಾರಕಿಹೊಳಿ, ಮಲ್ಲಿಕಾರ್ಜುನ ಚರಂತಿಮಠ, ಸ್ಥಳೀಯ ಮುಖಂಡರು ಇದ್ದರು.

ಐಹೊಳೆಯಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರಜೆಗಳ ಮೇಲಿನ ಸಾಲದ ಹೊರೆ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಇವರಿಗೆ ತಕ್ಕ ಪಾಠ ಕಲಿಸಲು ಮತ್ತೊಮ್ಮೆ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಐಹೊಳೆ ಮತ್ತು ಕಳ್ಳಿಗುಡ್ಡ ಗ್ರಾಮದ 20ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.

ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಸ್ಥಳೀಯ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐಗಳಿಯಲ್ಲಿ ಮಹಾವೀರ ಜಯಂತಿ ಆಚರಣೆ
ಮನುಕುಲ ಉದ್ದಾರಿಸಿದ ಮಹಾನ್ ಚೇತನ: ಶಿವಲೀಲಾ ಸದಾಶಿವ ಬುಟಾಳಿ