ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ವಿ.ಸಿ.ಫಾರ್ಮ್ ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕೃಷಿ ಮೇಳ ನಡೆಯಲಿರುವ ಸ್ಥಳ ಪರಿಶೀಲಿಸಿ ನಂತರ ಕೃಷಿ ವಿವಿಯಲ್ಲಿ ಬೆಳೆಸಲಾಗಿರುವ ಕೃಷಿ ಪ್ರಾತ್ಯಕ್ಷಿಕೆಗಳನ್ನು ಪರಿ ವೀಕ್ಷಣೆ ಮಾಡಿದರು.
ಕೃಷಿ ಮೇಳದ ಮಳಿಗೆಗಳು, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಹಾರ ವ್ಯವಸ್ಥೆ, ವೇದಿಕೆಯ ವ್ಯವಸ್ಥೆ ಮುಂತಾದವುಗಳ ಕುರಿತು ಮಾಹಿತಿ ಪಡೆದರು. ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿಗಳಾದ ತಿಮ್ಮಯ್ಯ, ಗಂಗಾಧರ ಮತ್ತು ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.ಬಿಜಿ ನಗರಿಂದ ಕೊಪ್ಪವರೆಗೆ ಸಾರಿಗೆ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ
ತಾಲೂಕಿನ ಕೊಪ್ಪದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬಿಜಿ ನಗರದಿಂದ ಕೊಪ್ಪವರೆಗೆ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಈ ವೇಳೆ ಶಾಸಕ ದಿನೇಶ್ ಗೂಳಿಗೌಡ, ಡೀಸಿ ಡಾ.ಕುಮಾರ್, ಜಿಪಂ ಸಿಇಒ ಕೆ.ಆರ್.ನಂದಿನಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಾಣಾಧಿಕಾರಿ ಶರಣಬಸವರಾಜ ಉಪಸಿತರಿದ್ದರು.