ಭಾಗಮಂಡಲ, ತಲಕಾವೇರಿ ದೇವಸ್ಥಾನಗಳಿಗೆ ಮುಖ್ಯಮಂತ್ರಿ ಭೇಟಿ

KannadaprabhaNewsNetwork |  
Published : Feb 01, 2025, 12:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಹೇಶ್ ನಾಚಯ್ಯ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷ ಕಾಳನ ರವಿ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪ್ರಮುಖರು ಇದ್ದರು.

............

ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ:

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಜನಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಶುಕ್ರವಾರ ಮಡಿಕೇರಿಯಲ್ಲಿ ಚಾಲನೆ ನೀಡಿದರು.

23 ಅಸಂಘಟಿತ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‌ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು (ಮೆಕ್ಯಾನಿಕ್ ಸೇರಿದಂತೆ) ಅಂತೆಯೇ, ಕರ್ನಾಟಕ ಮೋಟಾರ್ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರಾದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ನಿಲ್ದಾಣ ಸಿಬ್ಬಂದಿ, ಮಾರ್ಗಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡೀಪೋ ಗುಮಾಸ್ತ, ಸಮಯ ಸೂಚಕ, ಕಾವಲುಗಾರ ಅಥವಾ ಪರಿಚಾರಕ, ನಿಲ್ದಾಣ ಲೋಡಿಂಗ್/ಅನ್‌ಲೋಡಿಂಗ್ ಸಿಬ್ಬಂದಿ, ಮೋಟಾರು ಗ್ಯಾರೇಜ್ ಸಿಬ್ಬಂದಿ, ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಸಿಬ್ಬಂದಿ, ಪಂಚರ್ ದುರಸ್ತಿ ಮಳಿಗೆ ಕಾರ್ಮಿಕರು, ವ್ಹೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈನ್‌ಮೆಂಟ್ ಸಿಬ್ಬಂದಿ, ನೀರಿನಿಂದ ವಾಹನ ಸ್ವಚ್ಛಗೊಳಿಸುವ ಘಟಕ ಸಿಬ್ಬಂದಿ, ಮೋಟಾರ್ ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ, ಟಿಂಕರಿಂಗ್, ಎಲೆಕ್ಟ್ರಿಕಲ್ ಹಾಗೂ ಎ.ಸಿ.ಘಟಕಗಳಲ್ಲಿನ ಸಿಬ್ಬಂದಿ ಕಾರ್ಮಿಕರನ್ನು ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ದಿ ಮಂಡಳಿಯಡಿ ಪ್ರತ್ಯೇಕವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್‌ ನೀಡಲಾಗುತ್ತಿದೆ.

ಸ್ಮಾರ್ಟ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಅಪಘಾತ ಪರಿಹಾರ ಸೌಲಭ್ಯ, ಸಹಜ ಮರಣ ಪರಿಹಾರ (ಅಂತ್ಯಕ್ರಿಯೆ ಧನಸಹಾಯ) ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯಡಿ ಅಪಘಾತ ಮರಣ, ಸ್ವಾಭಾವಿಕ ಮರಣ, ಮೃತ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ನೆರವು, ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ನೆರವು, ಮಹಿಳಾ ಕಾರ್ಮಿಕರಿಗೆ ಮಾತೃತ್ವ ನೆರವು ಸೇರಿದಂತೆ ಇತರೆ ಸೌಲಭ್ಯಗಳು ದೊರೆಯುತ್ತದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ