ಚಿಗುರು ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ: ಗೀತಾ

KannadaprabhaNewsNetwork |  
Published : Jul 07, 2025, 12:17 AM IST
೦೬ಬಿಹೆಚ್‌ಆರ್ ೩: ಬಾಳೆಹೊನ್ನೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಉದ್ಘಾಟಿಸಿದರು. ಬಿ.ಸಿ.ಗೀತಾ, ರವಿಚಂದ್ರ, ರಮೇಶ, ತಿಮ್ಮಯ್ಯಗೌಡ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರು, ವಿಶೇಷವಾದ ಚಿಗುರು ಕಾರ್ಯಕ್ರಮ ಮಕ್ಕಳ ಪ್ರತಿಭೆ ಹೊರತರಲು ಉತ್ತಮ ವೇದಿಕೆ. ಪ್ರೋತ್ಸಾಹದಾಯಕವಾಗಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ಸಿದ್ದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ವಿಶೇಷವಾದ ಚಿಗುರು ಕಾರ್ಯಕ್ರಮ ಮಕ್ಕಳ ಪ್ರತಿಭೆ ಹೊರತರಲು ಉತ್ತಮ ವೇದಿಕೆ. ಪ್ರೋತ್ಸಾಹದಾಯಕವಾಗಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ಆಯೋಜಿಸಿದ್ದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಮಕ್ಕಳಿಗೆ ಮುಂದಿನ ದಿನಗಳಲ್ಲಿ ಬೆಳೆಯಲು ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ. ಸರ್ಕಾರ ರಾಜ್ಯಾದ್ಯಂತ ಇಂತಹ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಿದೆ. ಮಲೆನಾಡು ಭಾಗದಲ್ಲಿ ಇಲಾಖೆ ಕಾರ್ಯಕ್ರಮಗಳು ನಡೆಯುವುದು ವಿರಳವಾಗಿದೆ. ಆದರೆ ಈ ಬಾರಿ ಮಲೆನಾಡು ಭಾಗವನ್ನು ಗಮನದಲ್ಲಿರಿಸಿಕೊಂಡು ಕಾರ್ಯಕ್ರಮ ಮಾಡಿರು ವುದು, ಮಕ್ಕಳಿಗೆ ಉತ್ತೇಜನ ನೀಡಿರುವುದು ಶ್ಲಾಘನೀಯ ಎಂದರು.

ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ ಮಾತನಾಡಿ, ಇಂದಿನ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್ ಯುಗದಲ್ಲಿ ಮಕ್ಕಳಿ ಗಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವುದು ಸಂತಸ ತಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇಂತಹ ಕಾರ್ಯಕ್ರಮ ನಡೆಸುತ್ತಿರುವ ಬೆಳವಣಿಗೆ, ಉತ್ಸಾಹ ಶ್ಲಾಘನೀಯ. ಕಲೆಯನ್ನು ಗುರುತಿಸಿದರೆ ಮಾತ್ರ ಕಲೆ ಬೆಳವಣಿಗೆ ಆಗಲು ಸಾಧ್ಯವಿದೆ. ಮಕ್ಕಳು ಕಂಪ್ಯೂಟರ್, ಮೊಬೈಲ್ ಬಿಟ್ಟು ಕಲೆ, ಸಂಸ್ಕೃತಿ ಉಳಿಸುವತ್ತ ಗಮನಹರಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ಸಿ.ಎನ್.ವೈಷ್ಣವಿ ತಂಡದಿಂದ (ಕರ್ನಾಟಕ ಶಾಸ್ತ್ರೀಯ ಸಂಗೀತ), ಚಿಕ್ಕಮಗಳೂರು ಹಂಸಿನಿ ತಂಡದಿಂದ (ಸುಗಮ ಸಂಗೀತ), ಕಳಸದ ಸುಖಿ ತಂಡದಿಂದ (ಜಾನಪದ ಗೀತೆ), ಎಸ್.ಪೇಟೆಯ ಕೃಪಾ ತಂಡದಿಂದ (ಸಮೂಹ ನೃತ್ಯ), ಬಾಳೆಹೊನ್ನೂರು ಶ್ರೀಕೃತಿ ತಂಡದಿಂದ (ನಾಟಕ), ಕಡೂರು ಸಾನ್ವಿಕ (ಏಕಪಾತ್ರಾಭಿನಯ), ಎಸ್.ಪೇಟೆ ದೇವನಿ ಪೃಥ್ವಿರಾಜ್ ಪುರ ತಂಡದಿಂದ (ಭರತನಾಟ್ಯ) ನಡೆಯಿತು. ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ, ರೋಟರಿ ನಿಯೋಜಿತ ಅಧ್ಯಕ್ಷ ಎಂ.ವಿ.ತಿಮ್ಮಯ್ಯಗೌಡ, ಕಾರ್ಯಕ್ರಮ ಸಂಘಟಕಿ ನಯನ ಪ್ರಸಾದ್, ಶಿಕ್ಷಕರಾದ ಕೆ.ಎಂ.ರಾಘವೇಂದ್ರ, ಸುರೇಂದ್ರ ನಾಯ್ಕ ಮತ್ತಿತರರು ಹಾಜರಿದ್ದರು.೦೬ಬಿಹೆಚ್‌ಆರ್ ೩:

ಬಾಳೆಹೊನ್ನೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಉದ್ಘಾಟಿಸಿದರು. ಬಿ.ಸಿ.ಗೀತಾ, ರವಿಚಂದ್ರ, ರಮೇಶ, ತಿಮ್ಮಯ್ಯಗೌಡ ಇದ್ದರು.

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!